ಕರೊನಾ ನೆಪದಲ್ಲಿ ಧಾರ್ವಿುಕ ಆಚರಣೆಗೆ ತಡೆ

GOPALA KRISHNA BELUR,
Published on

ಶಿವಮೊಗ್ಗ: ಕರೊನಾ ನೆಪದಲ್ಲಿ ಸರ್ಕಾರ ಧಾರ್ವಿುಕ ಆಚರಣೆಗಳಿಗೆ ತಡೆ ಹಾಕಲು ಹೊರಟಿದೆ. ಒಂದು ವೇಳೆ ಸಾರ್ವಜನಿಕವಾಗಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಿದ್ದರೆ ಯಡಿಯೂರಪ್ಪ ಅವರ ಸರ್ಕಾರ ಉಳಿಯುವುದಿಲ್ಲ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಅವಕಾಶ ನೀಡದಿರುವುದು ಖಂಡನೀಯ. ನಾವು ಗಣೇಶನ ಮೂರ್ತಿ ಸ್ಥಾಪನೆ ಮಾಡಿಯೇ ತೀರುತ್ತೇವೆ ಸವಾಲು ಹಾಕಿದರು.

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸಕ್ಕೆ ಪ್ರಧಾನಿ ಮೋದಿ ಅವರು ಆಗಮಿಸಿ ಕಾರ್ಯಕ್ರಮ ನಡೆಸುವುದಾದರೆ ನಾವ್ಯಾಕೆ ಗಣೇಶೋತ್ಸವ ನಡೆಸಬಾರದು ಎಂದು ಪ್ರಶ್ನಿಸಿದರು. ಅಲ್ಲದೆ ಶ್ರೀರಾಮನ ಪ್ರತಿಷ್ಠಾಪನೆಯಿಂದ ದೇಶ ಪ್ರಗತಿ ಹೊಂದುತ್ತದೆ ಎಂದಾದರೆ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಿಂದ ನಮ್ಮ ರಾಜ್ಯ ಅಭಿವೃದ್ಧಿಯಾಗಬಹುದು. ಅದಕ್ಕಾಗಿ ನಾವು ಗಣೇಶನನ್ನು ಪ್ರತಿಷ್ಠಾಪಿಸಿ, ವಿಜೃಂಭಣೆಯಿಂದ ಮೆರವಣಿಗೆ ನಡೆಸುತ್ತೆವೆ ಎಂದರು.

ಜಿಲ್ಲೆಯಲ್ಲಿ ಈ ವರ್ಷ ಪ್ರವಾಹ ಉಂಟಾಗಿ ಸಾಕಷ್ಟು ಹಾನಿಯಾಗಿದೆ. ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಬಂದಿರುವೆ. ಕಳೆದ ಬಾರಿಯೇ ಸರಿಯಾಗಿ ಪರಿಹಾರ ನೀಡಿಲ್ಲ. ಇನ್ನೂ ಈ ಪರಿಹಾರ ಎಷ್ಟರ ಮಟ್ಟಿಗೆ ರಾಜ್ಯ ಸರ್ಕಾರ ನೀಡಬಹುದು ಎಂದು ಯೋಚಿಸಬೇಕಿದೆ. ದಯವಿಟ್ಟು ನಿರಾಶ್ರಿತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net