ಕರ್ನಾಟಕ ಕಾವಲು ಪಡೆ ಪ್ರತಿಭಟನೆ

03-APR-GPT-1
Published on

ಗುಂಡ್ಲುಪೇಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕರ್ನಾಟಕ ಕಾವಲು ಪಡೆ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಬಸವೇಶ್ವರ ವೃತ್ತದ ಬಳಿ ಸಮಾವೇಶಗೊಂಡ ಕಾರ್ಯಕರ್ತರು ರಾಜ್ಯ ಸರ್ಕಾರ ಪದೇ ಪದೆ ಬೆಲೆ ಏರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಾರಿಗೆ ಬಸ್ ನಿಲ್ದಾಣ ಎದುರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು. ನಂತರ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿದರು.

ಸಂಘಟನೆಯ ಅಧ್ಯಕ್ಷ ಅಬ್ದುಲ್ ಮಾಲೀಕ್ ಮಾತನಾಡಿ, ಸರ್ಕಾರ ಹಾಲು, ಬಸ್ ಟಿಕೆಟ್, ವಿದ್ಯುತ್, ಡೀಸೆಲ್, ಆಹಾರ ಪದಾರ್ಥಗಳು, ಅಡುಗೆ ಎಣ್ಣೆ ಸೇರಿದಂತೆ ಜನರ ದೈನಂದಿನ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಸಾರ್ವಜನಿಕರು ಜೀವನ ನಡೆಸುವುದು ದುಸ್ತರವಾಗುತ್ತಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಟೋಲ್ ದರ ಹೆಚ್ಚಿಸಿದರೆ ರಾಜ್ಯ ಸರ್ಕಾರ ಡೀಸೆಲ್ ಬೆಲೆ ಏರಿಸಿರುವುದರಿಂದ ಸಾಗಣೆ ವೆಚ್ಚ ಹೆಚ್ಚಳವಾಗುತ್ತಿವೆ. ಇದರಿಂದ ಉಳಿದ ಎಲ್ಲ ವಸ್ತುಗಳ ಬೆಲೆ ಏರುತ್ತವೆ. ಆದ್ದರಿಂದ ಸರ್ಕಾರ ಕೂಡಲೇ ಬೆಲೆ ಇಳಿಸಬೇಕು ಎಂದು ಒತ್ತಾಯಿಸಿ ಪ್ರಭಾರ ತಹಸೀಲ್ದಾರ್ ಜಯಪ್ರಕಾಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ಅಬ್ದುಲ್ ರಷೀದ್, ಗೌರವಾಧ್ಯಕ್ಷ ರಾಮೇಗೌಡ, ಎಸ್.ಮುಬಾರಕ್, ಮಂಜುನಾಥ್, ಸಾದಿಕ್ ಪಾಷ, ಶಕೀಲ್, ಮಹದೇವು, ಕನ್ನಡ ಹೋರಾಟಗಾರ ಬ್ರಹ್ಮಾನಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net