

ರಾವಂದೂರು: ಪಿರಿಯಾಪಟ್ಟಣ ತಾಲೂಕು ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆ ಕಾಲೇಜು ವಿಭಾಗದಿಂದ ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜಾಹ್ನವಿ ಕೆ.ಯು. ಪ್ರಥಮ ಬಹುಮಾನ, ಪ್ರಥಮ ಪಿಯುಸಿ ವಿದ್ಯಾರ್ಥಿ ಅಮೂಲ್ಯಾ ಡಿ.ಜಿ ಪ್ರಥಮ ಸ್ಥಾನ ಹಾಗೂ ಜಾನಪದ ಗೀತೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಚ್.ಆರ್. ಹರ್ಷಿತಾ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮರಿಸ್ವಾಮಿ ಬಹುಮಾನ ವಿತರಣೆ ಮಾಡಿದರು. ಈ ವಿದ್ಯಾರ್ಥಿಗಳನ್ನು ಕೆಪಿಎಸ್ ಶಾಲೆಗಳ ಉಪಾಧ್ಯಕ್ಷ ಆರ್.ವಿ.ವಿಶ್ವನಾಥ್, ಪ್ರಾಂಶುಪಾಲ ಲಕ್ಷ್ಮೀಕಾಂತ್, ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ್, ಉಪನ್ಯಾಸಕರು , ಎಸ್‌ಡಿಎಂಸಿ ಸದಸ್ಯರು ಅಭಿನಂದಿಸಿದ್ದಾರೆ.