ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ

11.npk-1
Published on

ನಾಪೋಕ್ಲು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.
ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಹ್ಯಾರಿಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಪ್ರತಿಭಾ ವಿಕಸನಕ್ಕೆ ದೊರೆತ ಅವಕಾಶ ಬಳಸಿಕೊಂಡು ಕ್ರಿಯಾಶೀಲರಾಗಬೇಕು ಎಂದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುಳಾ ಚಿತ್ರಾಪುರ ಮಾತನಾಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲಾ ಆಡಳಿತ ಮಂಡಳಿ ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾಷಣ, ಜಾನಪದ ಗೀತೆ, ನೃತ್ಯ, ಚಿತ್ರಕಲೆ ಛದ್ಮವೇಷ, ರಸಪ್ರಶ್ನೆ, ಧಾರ್ಮಿಕ ಪಠಣ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ 18 ಶಾಲೆಗಳ 435 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net