ಕರ್ನಾಟಕ ಮಹಿಳಾ ಥ್ರೋಬಾಲ್ ತಂಡಕ್ಕೆ ಆಯ್ಕೆ

ಕರ್ನಾಟಕ ಮಹಿಳಾ ಥ್ರೋಬಾಲ್ ತಂಡಕ್ಕೆ ಆಯ್ಕೆ
Published on

ಹಾಸನ: ನಗರದ ರಾಜೀವ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಬಿ.ಪಿ.ನವ್ಯಶ್ರೀ ರಾಜ್ಯ ಥ್ರೋಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ತಂಡದ ಆಯ್ಕೆಯಲ್ಲಿ ಭಾಗವಹಿಸಿ ಅತ್ಯುತ್ತಮ ಆಟದ ಪ್ರದರ್ಶನ ನೀಡುವ ಮುಖೇನ ರಾಜ್ಯ ತಂಡದಲ್ಲಿ ತಮ್ಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಅವರು ಮುಂದೆ ರಾಷ್ಟ್ರೀಯ ಮಹಿಳಾ ಥ್ರೋಬಾಲ್ ಪಂದ್ಯಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಆಯ್ಕೆ ಪ್ರಕ್ರಿಯೆಯಲ್ಲಿ ನವ್ಯಶ್ರೀ ರಾಜ್ಯ ತಂಡಕ್ಕೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಸ್ತುತ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಎರಡನೇ ವರ್ಷದ ನಾಲ್ಕನೇ ಸೆಮಿಸ್ಟರ್‌ನಲ್ಲಿ ಓದುತ್ತಿರುವ ನವ್ಯಶ್ರೀ ಅವರಿಗೆ ಕಾಲೇಜಿನ ಮುಖ್ಯ ದೈಹಿಕ ನಿರ್ದೇಶಕ ಉಮೇಶ್ ಹಾಗೂ ಸಹ ದೈಹಿಕ ನಿರ್ದೇಶಕ ಗಣೇಶ್ ಮಾರ್ಗದರ್ಶನ ನೀಡಿದ್ದರು. ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net