ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

04 yelandur 01
Published on

ಯಳಂದೂರು: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಶೆಟ್ಟಿ ಬಣ) ಹಾಗೂ ಇತರ ಸಂಘಟನೆಗಳ ಸದಸ್ಯರು ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ಕರವೇ ತಾಲೂಕು ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಮಾತನಾಡಿ, ಈ ಬಾರಿ ಮಳೆಯಾಗದ ಕಾರಣ ರಾಜ್ಯಾದ್ಯಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಆರ್‌ಎಸ್ ಅಣೆಕಟ್ಟು ತುಂಬಿಲ್ಲ. ಆದರೂ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಪರಿಣಾಮ ಭವಿಷ್ಯದಲ್ಲಿ ಕುಡಿಯುವ ನೀರಿಗೂ ಪರದಾಡುವ ಸನ್ನಿವೇಶ ಸೃಷ್ಟಿಯಾಗಲಿದೆ. ಆದ್ದರಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಚಾಮರಾಜನಗರವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು ಎಂದು ಆಗ್ರಹಿಸಿದರು.

ನಂತರ ತಹಸೀಲ್ದಾರ್ ಜಯಪ್ರಕಾಶ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ದಸಂಸ ಜಿಲ್ಲಾ ಸಂಚಾಲಕ ಯರಿಯೂರು ರಾಜಣ್ಣ, ಬಳೇಪೇಟೆ ರಾಜು, ಮಹದೇವ್‌ಸಿಂಗ್, ಭೀಮಪ್ಪ, ಅಮ್ಜದ್, ಪ್ರಸಾದ್, ರಾಜಣ್ಣ, ಕುಮಾರ್, ಸಿದ್ದರಾಜು, ಮಂಜು, ವೈ.ಎಂ. ರಂಗನಾಥ, ಗುಂಬಳ್ಳಿ ರಾಜು, ಮಾದನಾಯಕ ಹಲವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net