ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

41
Published on

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಕುಲಪತಿ ಶರಣಪ್ಪ ವಿ.ಹಲಸೆ ಅವರು ಸಂವಿಧಾನ ಪೀಠಿಕೆಯನ್ನು ಓದುವ ಮುಖೇನ ಸಿಬ್ಬಂದಿಗೆ ಪ್ರತಿಜ್ಞೆ ಬೋಧಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಪತಿಗಳಾದ ಶರಣಪ್ಪ ವಿ.ಹಲಸೆ ಪ್ರಜಾಪ್ರಭುತ್ವ ಪೀಠಿಕೆಯನ್ನು ಓದವುದರೊಂದಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ತತ್ವಗಳನ್ನು ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳುವುದರಿಂದ ನೈಜ ಆಶಯ ಪಾಲನೆಯಾಗುತ್ತದೆ ಎಂದು ಹೇಳಿದರು. ಈ ಕಾರ್ಯಕ್ರಮವು ರಾಜ್ಯದಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಲಿದೆ. ಪ್ರತಿಯೊಬ್ಬ ನಾಗರಿಕನೂ ಪ್ರಜಾಪ್ರಭುತ್ವವನ್ನು ಪಾಲಿಸುವುದು ಮುಖ್ಯ ಎಂದರು.
ಕುಲಸಚಿವ ಕೆ.ಎಲ್.ಎನ್.ಮೂರ್ತಿ ಮಾತನಾಡಿ, ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವ ಪ್ರಜಾಪ್ರಭುತ್ವವನ್ನು ಪಾಲಿಸಿ ಪೋಷಿಸುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ವಿವಿಯ ಪರೀಕ್ಷಾಂಗ ಕುಲಸಚಿವ ಕೆ.ಬಿ.ಪ್ರವೀಣ್, ಹಣಕಾಸು ಅಧಿಕಾರಿ ಖಾದರ್ ಪಾಷಾ, ವಿವಿಧ ವಿಭಾಗದ ಡೀನ್‌ಗಳಾದ ಲಕ್ಷ್ಮೀ, ರಾಮನಾಥಂ ನಾಯ್ಡು, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಅಂಬೇಡ್ಕರ್ ಅಧ್ಯಯನ ಕೇಂದ್ರದ ಶಿವಕುಮಾರಸ್ವಾಮಿ, ಸಹಾಯಕ ಪ್ರಾಧ್ಯಾಪಕ ಎಚ್.ಬೀರಪ್ಪ, ಗಣೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net