ಕರ್ನಾಟಕ ಸೇನಾಪಡೆಯಿಂದ ತಮಟೆ ಚಳವಳಿ

IMG-20250106-WA0004
Published on

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ದರ ಶೇ. 15ರಷ ಹೆಚ್ಚಿಸಿರುವುದನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ  ತಮಟೆ ಚಳವಳಿ ನಡೆಸಲಾಯಿತು.

ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿರತರು ಸರ್ಕಾರ, ನಿಗಮದ ಸಚಿವರ ವಿರುದ್ದ  ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.ಪ್ರ

ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಸರಕಾರವು ಬಸ್ ದರವನ್ನು ಶೇ.15ರಷ್ಟು ಹೆಚ್ಚಿಸಿರೆ ವುದರಿಂದ ಸಾರ್ವಜನಿಕರಿಗೆ ತೀವ್ರ ಹೊರೆಯಾಗಿದೆ. ಈಗಾಗಲೆ ಎಲ್ಲಾ ರೀತಿಯ ದಿನಸಿ ಪದಾರ್ಥಗಳು, ಎಣ್ಣೆ, ಕಾಳುಗಳು, ಆಹಾರ ಪದಾರ್ಥಗಳು ತುಟ್ಟಿಯಾಗಿವೆ. ಡೀಸೆಲ್, ಪೆಟ್ರೋಲ್, ನೋಂದಣಿ ಶುಲ್ಕ ಮತ್ತು ಮುದ್ರಾಂಕ ಶುಲ್ಕಗಳನ್ನು ಹೆಚ್ಚಿಸಲಾಗಿದ್ದು, ಜನತೆಗೆ ತುಂಬಾ ತೊಂದರೆಯಾಗಿದೆ ಕೂಡಲೇ ಬಸ್ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ನಿಜಧ್ವನಿಗೋವಿಂದ, ಲಿಂಗರಾಜು, ರವಿಚಂದ್ರಪ್ರಸಾದ್, ರಾಚಪ್ಪ, ತಾಂಡವಮೂರ್ತಿ, ವೀರಭದ್ರ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net