ಕರ್ನಾಟಕದಲ್ಲಿ ಆಪ್​ನಿಂದ ಪ್ರಾಮಾಣಿಕ ಸರ್ಕಾರ

aap
Published on

ಹುಬ್ಬಳ್ಳಿ: ಕರ್ನಾಟಕದಲ್ಲಿ ಆಮ್ ಅದ್ಮಿ ಪಕ್ಷದಿಂದ ಮಾತ್ರ ಪ್ರಾಮಾಣಿಕ ಹಾಗೂ ಒಳ್ಳೆಯ ಸರ್ಕಾರ ನೀಡಲು ಸಾಧ್ಯ ಎಂದು ದೆಹಲಿ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಯಾವುದೇ ಸರ್ಕಾರವಿರಲಿ ಇಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಈಗ ಅಧಿಕಾರದಲ್ಲಿರುವ ಬಿಜೆಪಿಯದ್ದು ಶೇ. 40 ರಷ್ಟು ಕಮಿಷನ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ ಎಂದರು.

ದೆಹಲಿಯಲ್ಲಿ ನಮ್ಮ ಸರ್ಕಾರ ಏನೇನೂ ಮಾಡಿದೆ. ಪಂಜಾಬ್​ನಲ್ಲಿ ಏನೇನೂ ಮಾಡುತ್ತಿದ್ದೇವೆ. ಜನರಿಗೆ ಉಚಿತ ವಿದ್ಯುತ್, ಉತ್ತಮ ಶಿಕ್ಷಣ, ಇನ್ನಿತರ ಸೌಲಭ್ಯಗಳನ್ನು ನೀಡಿದ್ದೇವೆ. ಈ ವಿಷಯಗಳನ್ನು ದಾವಣಗೆರೆಯಲ್ಲಿ ಶನಿವಾರ ನಡೆಯುವ ಸಾರ್ವಜನಿಕ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಮಾತನಾಡಿ, ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ದೆಹಲಿ ಹಾಗೂ ಪಂಜಾಬ್​ನಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಕ್ಷದ ಮಾದರಿಯಲ್ಲಿಯೇ ಕರ್ನಾಟಕ ರಾಜಕೀಯದಲ್ಲೂ ಕ್ರಾಂತಿ ಆಗಬೇಕಿದೆ. ಕ್ಲೀನ್ ಕರ್ನಾಟಕ ಹಾಗೂ ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕಾಗಿ ಆಮ್ ಆದ್ಮಿ ಪಕ್ಷವೇ ಸೂಕ್ತವಾದದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net