ಕಲಬುರಗಿ ಅಗ್ರಿಕಲ್ಚರ್ ಹಬ್‌ಗೆ ಅಗತ್ಯ ಕ್ರಮ

1504Klb02
Published on

ಕಲಬುರಗಿ: ಜಿಲ್ಲೆಯನ್ನು ಅಗ್ರಿಕಲ್ಚರ್ ಹಬ್ ಮಾಡಲು ನಿರ್ಧರಿಸಿದ್ದು, ಆರು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಗಂಜ್ ವರ್ತಕರ ಸಂಘ ಸೇರಿ ಎಲ್ಲರೂ ಸಹಕಾರ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗಂಜ್ ವರ್ತಕರ ಸಂಘದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಸೋಮವಾರ ಮತಯಾಚಿಸಿದ ಅವರು, ಜಿಲ್ಲೆಯ ರೈತರ ಬೆಳೆ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಕೋಲ್ಡ್ ಸ್ಟೋರೇಜï, ಕಸ್ಟಂ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ತಿಳಿಸಿದರು.

ಗಂಜ್ ವರ್ತಕರ ಸಮಸ್ಯೆ ಬಗೆಹರಿಸಲು ಹಾಗೂ ವಯೋಸಹಜ ನಿವೃತ್ತರಾಗುವ ಹಮಾಲರ ಆರ್ಥಿಕ ಸದೃಢತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಹಿಂದಿನ ಸಂಸದರು ಜಿ¯್ಲÉ ರೈತರ, ವರ್ತಕರ ಸಮಸ್ಯೆಗಳ ಪರಿಹಾರಕ್ಕಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರದ ಎಪಿಎಂಸಿ ಕಾಯ್ದೆ ತಿದ್ದುಪಡಿ ನಿರ್ಧಾರದ ವಿರುದ್ಧ ಧ್ವನಿ ಎತ್ತಿ ವರ್ತಕರ ಹಿತ ಕಾಪಾಡಲು ಪ್ರಯತ್ನಿಸಿಲ್ಲ ಎಂದು ದೂರಿದರು.

ನೆಹರು ಗಂಜ್ ನಗರದ ಹೊರವಲಯದಲ್ಲಿ ಸ್ಥಳಾಂತರಕ್ಕೆ ಚುನಾವಣೆ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಒಂದು ವೇರ್‌ಹೌಸ್, ಕೋಲ್ಡï ಸ್ಟೋರೇಜ್, ಕುಡಿಯುವ ನೀರು ಹಾಗೂ ಶೌಚಗೃಹ ನಿರ್ಮಾಣಕ್ಕೆ ಕ್ರಮ ಜರುಗಿಸಲಾಗುವುದು. ನಾವು ಮಾತು ಕೊಟ್ಟರೆ ಕಲ್ಲಿನಲ್ಲಿ ಕೆತ್ತಿದಂತೆ ಎಂದರು.
ಇದು ರಾಧಾಕೃಷ್ಣ ಮತ್ತು ಜಾಧವ್ ನಡುವಿನ ಚುನಾವಣೆಯಲ್ಲ. ಇದು ಕಲಬುರಗಿ ಅಭಿವೃದ್ದಿ, ಜಿ¯್ಲÉಯ ರೈತರು ಮತ್ತು ವರ್ತಕರ ಹಿತ ಕಾಪಾಡುವ ಚುನಾವಣೆ. ಹೀಗಾಗಿ ನೀವೆಲ್ಲ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ವೈದ್ಯಕೀಯ ಶಿP್ಷÀಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ, ಗಂಜï ವರ್ತಕರ ಸಂಘದ ಹಿತಾಸಕ್ತಿಗೆ ವಿರುದ್ಧವಾಗಿ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿಲ್ಲ ಎಂದರು.
ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಮತಯಾಚಿಸಿದರು. ಶಾಸಕಿ ಕನೀಜï ಫಾತಿಮಾ, ಕಾಂಗ್ರೆಸ್ ಜಿಲ್ಲಾಧ್ಯP್ಷÀ ಜಗದೇವ ಗುತ್ತೇದಾರ್, ಗಂಜ್ ವರ್ತಕರ ಸಂಘದ ಅಧ್ಯP್ಷÀ ಶ್ರೀಮಂತ ಉದನೂರ, ಅಕ್ಕಿ ವ್ಯಾಪಾರಸ್ಥರ ಸಂಘದ ಅಧ್ಯP್ಷÀ ರವೀಂದ್ರ ಮಾದಮಶೆಟ್ಟಿ, ದಾಲ್‌ಮಿಲï ಸಂಘದ ಅಧ್ಯಕ್ಷ ಚಂದ್ರಶೇಖರ ಕೋಬಾಳ, ಕೀಟನಾಶಕ ವಿತರಕರ ಸಂಘದ ಅಧ್ಯಕ್ಷ ಬಸವರಾಜ ಮಂಗಲಗಿ, ಮುನಿಮ್ ಸಂಘದ ಅಧ್ಯP್ಷÀ ಭೀಮಶ್ಯಾ ಜೀವಣಗಿ, ಹಮಾಲರ ಸಂಘದ ಅಧ್ಯP್ಷÀ ಮೌಲಾನಾ, ಪ್ರಮುಖರಾದ ನೀಲಕಂಠರಾವ ಮೂಲಗೆ, ಭಾಗನಗೌಡ, ಬಸವರಾಜ ಭೀಮಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net