ಕಲಬುರಗಿ :ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಡಿ.ಸಿ ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಬಿ.ಸುಶೀಲಾ, ಬೀದರ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಎಲ್.ಚಂದ್ರಶೇಖರ ನಾಯಕ್, ಬಳ್ಳಾರಿ ಡಿ.ಸಿ. ಪ್ರಶಾಂತ ಕುಮಾರ ಮಿಶ್ರಾ, ವಿಜಯ ನಗರ ಡಿ.ಸಿ ಎಂ.ಎಸ್.ದಿವಾಕರ, ಕೊಪ್ಪಳ ಡಿ.ಸಿ ಸುಂದರೇಶ ಬಾಬು ಎಂ. ಸೇರಿದಂತೆ ವಿಭಾಗದ ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿಗಳು, ತಹಶೀಲ್ದಾರರು, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಭಾಗವಹಿಸಿದ್ದರು.