ಕಲಬುರಗಿಗೆ ಪ್ರಧಾನಿ ಮೋದಿ 16ರಂದು

modi
Published on

ಕಲಬುರಗಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಲಬುರಗಿ ಗ್ರಾಮಾಂತರ, ನಗರ, ಬೀದರ್ ಜಿಲ್ಲಾ ಕಾರ್ಯಕರ್ತರ ಮತ್ತು ಸಾರ್ವಜನಿಕರ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಾ.೧೬ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರz್ದೆÃವಾಡಗಿ ತಿಳಿಸಿದರು.

ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಬೆಳಗ್ಗೆ ೧೧ಕ್ಕೆ ಕಾರ್ಯಕ್ರಮ ನಡೆಯಲಿದೆ. ಉಭಯ ಲೋಕಸಭೆ ಕ್ಷೇತ್ರಗಳ ಸಹಸ್ರಾರು ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಮೋದಿ ಅವರೊಂದಿಗೆ ಕೇಂದ್ರ ಸಚಿವರು, ಈ ಭಾಗದ ಸಂಸದರು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಎರಡು ತಿಂಗಳಲ್ಲಿ ೧೩ ಕೊಲೆ ಆಗಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶರಣರು, ಸೂಪಿ ಸಂತರ ನೆಲದಲ್ಲಿ ಅಮಾಯಕರ ಮೇಲೆ ಹಲ್ಲೆ, ದಬ್ಬಾಳಿಕೆ ಆಗುತ್ತಿದೆ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಸುಳ್ಳು ರೌಡಿ ಶೀಟರ್, ಗಡಿಪಾರು ಮಾಡಿಸುವ ಕೆಟ್ಟ ಪದ್ಧತಿಗೆ ನಾಂದಿ ಹಾಡಲಾಗಿದೆ ಎಂದರು.

ಸAಸದ ಡಾ.ಉಮೇಶ ಜಾಧವ್, ಶಾಸಕ ಬಸವರಾಜ ಮತ್ತಿಮಡು, ವಿಭಾಗೀಯ ವಕ್ತಾರ ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಮಾಲಿಕಯ್ಯ ಗುತ್ತೇದಾರ್, ಅಶೋಕ ಬಗಲಿ, ಸಂತೋಷ ದೊಡ್ಡಮನಿ, ಬಾಬುರಾವ ಹಾಗರಗುಂಡಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net