ಕಲಬುರಗಿಯಲ್ಲಿ ದಾಖಲೆ ಇಲ್ಲದ 1.90 ಕೋಟಿ ರೂ.ವಶ

22-gul1
Published on

ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ಗುರುಕರ್ ತಿಳಿಸಿದ್ದಾರೆ.

ಇದರಲ್ಲಿ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.40 ಕೋಟಿ, ಉಳಿದಂತೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ‌ ಮಾಡುವಲ್ಲಿ ನಿರತವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net