ಕಲಬುರಗಿಯಲ್ಲಿ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ

IMG-20220917-WA0026
Published on

ಕಲಬುರಗಿ: ತಳವಾರ ಸಮುದಾಯಕ್ಕೆ ಎಸ್ .ಟಿ. ಪ್ರಮಾಣಪತ್ರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಳವಾರ ಎಸ್ಟಿ ಹೋರಾಟ ಸಮಿತಿಯಿಂದ ಕಪ್ಪುಬಾವುಟ ಪ್ರದರ್ಶನ ಮಾಡಲಾಯಿತು.

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು. ನಂತರ ಕನ್ನಡ ಭವನದ ಬಳಿ ಸುಮಾರು 10ಜನರು ಮುಖ್ಯಮಂತ್ರಿಗಳ ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ ಟಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net