ಕಲಾವಿದರ ಒಕ್ಕೂಟದ ಸಾಮಾನ್ಯ ಸಭೆ

Vijayakumar Sonare
Published on

ಬೀದರ್: ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಾಮಾನ್ಯ ಸಭೆ ಆ.7ರಂದು ಬೆಳಗ್ಗೆ 10.30ಕ್ಕೆ ರಾಯಚೂರು ಜಿಲ್ಲೆ ಸಿಂಧನೂರ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ಆಶ್ರಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಒಕ್ಕೂಟದ ಗೌರವಾಧ್ಯಕ್ಷೆ ಪದ್ಮಶ್ರೀ ಮಂಜಮ್ಮ ಜೋಗತಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಕಳೆದ ವರ್ಷ ಬೀದರ್ ನಲ್ಲಿ ಒಕ್ಕೂಟದ ಪ್ರಥಮ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆದಿತ್ತು. 2ನೇ ವಾರ್ಷಿಕೋತ್ಸವ ಕುರಿತು ಸ್ಥಳ ಮತ್ತು ದಿನಾಂಕ ನಿಗದಿ ಚರ್ಚಿಸುವ ಜತೆಗೆ ಸೆ.17ರಂದು ಹೈದರಾಬಾದ್ ಕರ್ನಾಟಕ ವಿಮೋಚನೆ 75 ವರ್ಷ ಪೂರೈಸುವ ನಿಮಿತ್ತ ಏಳು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಮೃತ ಮಹೋತ್ಸವ ಸಂಭ್ರಮಾಚರಣೆ ಕುರಿತು ಚರ್ಚಿಸಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ತಿಳಿಸಿದ್ದಾರೆ.
ಮಂಜಮ್ಮ ಜೋಗತಿ ನೇತೃತ್ವದ ನಿಯೋಗ ಶೀಘ್ರ ಸಿಎಂ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಬೇಡಿಕೆಗಳ ಮನವಿ ಸಲ್ಲಿಕೆ ಇತರ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. ಎಲ್ಲ ಜಿಲ್ಲೆ ಮತ್ತು ತಾಲೂಕು ಅಧ್ಯಕ್ಷರು ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net