ಕಲಾವಿದರಿಗೆ ಮಾಸಾಶನ

Untitled--000009
Published on

ಚಿತ್ರದುರ್ಗ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲೆ,ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ, ಆರ್ಥಿಕ ವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಪ್ರತಿ ತಿಂಗಳು 2ಸಾವಿರ ರೂ.ಮಾಸಾಶನ ನೀಡಲಿದೆ. ಈ ಯೋಜನೆಗೆ ಆಸಕ್ತ ಅರ್ಹ 58 ವರ್ಷವ ಯಸ್ಸು ಅಥವಾ ಅದನ್ನು ಮೀರಿದ ವಯಸ್ಸಿನ ಕಲಾವಿದರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 25 ವರ್ಷಗಳ ಕಾಲ ಕಲೆ,ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರ ಗಳಲ್ಲಿ ಗಣನೀಯ ಸೇವೆ ಸಲ್ಲಿಸಿರಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ 08194-224496 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net