ಕಲಿಕಾ ಸಾಮರ್ಥ್ಯ ವೃದ್ಧಿಗೆ ಮಿತ್ರ ಸಹಕಾರಿ, ಮುಖಂಡ ಶೆಟ್ಟಿಗೆರೆ ಎಂ.ರಾಜಣ್ಣ ಅಭಿಮತ, ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆ ವಿತರಣೆ

31Knd2Photo7 NEW
Published on

ಕುಂದಾಣ: ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆಯು ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಅತ್ಯುತ್ತಮ ಮಾಧ್ಯಮವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶೆಟ್ಟಿಗೆರೆ ಎಂ.ರಾಜಣ್ಣ ಅಭಿಪ್ರಾಯಪಟ್ಟರು.

ವಿಶ್ವನಾಥಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸೋಮವಾರ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಸಂಚಿಕೆ ವಿತರಿಸಿ ಮಾತನಾಡಿದರು.

ಪಠ್ಯಪುಸ್ತಕದಲ್ಲಿನ ಪಾಠವನ್ನು ಸರಳ ರೂಪದ ವಿವರಣೆಯೊಂದಿಗೆ ಸಂಚಿಕೆಯಲ್ಲಿ ಪ್ರಕಟಿಸುತ್ತಿದ್ದು, ಇದು ಎಲ್ಲರಿಗೂ ಅರ್ಥವಾಗುವಂತ್ತಿದೆ. ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಕೆಗೂ ಸಂಚಿಕೆ ಪೂರಕವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ನಿತ್ಯ ಸಂಚಿಕೆಯನ್ನು ತಪ್ಪದೆ ಅಭ್ಯಾಸ ಮಾಡುವ ಮೂಲಕ ಶೈಕ್ಷಣಿಕ ಸಾಲಿನಲ್ಲಿ ಹೆಚ್ಚು ಅಂಕ ಪಡೆದು ಶಾಲೆಗೆ ಗೌರವ ತರುವ ಜತೆಗೆೆ ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಳ್ಳುವಂತೆ ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ರಂಗಪ್ಪ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂಬ ಆಶಯದಿಂದ ವಿಜಯವಾಣಿ ಉದ್ಯೋಗ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ದಾನಿಗಳು ಉಚಿತವಾಗಿ ನೀಡುತ್ತಿದ್ದು, ನಿಸ್ವಾರ್ಥ ಸೇವೆಯು ಸಾರ್ಥಕವಾಗುವಂತೆ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಬೇಕು ಎಂದರು.

ಮಾಧ್ಯಮಿಕ ಶಾಲೆ ಮುಖ್ಯಶಿಕ್ಷಕ ನಾಗೇಶ್ ಮಾತನಾಡಿ, ಪ್ರತಿದಿನ ಶಾಲೆಯಲ್ಲಿ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ವಿತರಿಸಲಾಗುವುದು. ಪ್ರತಿಯೊಬ್ಬರೂ ತಪ್ಪದೆ ಓದಬೇಕು. ಶ್ರದ್ಧೆಯಿಂದ ಅಭ್ಯಾಸ ಮಾಡಿ, ಪತ್ರಿಕೆಯನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಇದೊಂದು ಜ್ಞಾನದ ಕಣಜವಾಗಿದೆ ಎಂದು ಕಿವಿಮಾತು ಹೇಳಿದರು.

ಮುಖಂಡರಾದ ಮಂಜುನಾಥ್, ಪ್ರಸನ್ನ, ಎಸ್‌ಡಿಎಂಸಿ ಸದಸ್ಯ ಹರೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net