

ನಾಪೋಕ್ಲು: ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಾಪೋಕ್ಲು ಕ್ಲಸ್ಟರ್ ವ್ಯಾಪ್ತಿಯ ಕಲಿಕಾ ಹಬ್ಬವನ್ನು ಎಮ್ಮೆಮಾಡಿನಲ್ಲಿ ಆಯೋಜಿಸಲಾಗಿತ್ತು.
ಎಮ್ಮೆಮಾಡುವಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳು ಆಟ-ಪಾಠಗಳೊಂದಿಗೆ ಸಂಭ್ರಮಿಸಿದರು. ಇದಕ್ಕೂ ಮುನ್ನ ಎಮ್ಮೆಮಾಡು ಮುಖ್ಯರಸ್ತೆಯಲ್ಲಿ ಅತಿಥಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಸಾಗಿದರು.
ಮಡಿಕೇರಿ ತಾಲೂಕಿನ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಬಡ್ಡಿರ ನಳಿನಿ ಪೂವಯ್ಯ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳು ಜ್ಞಾನ ವೃದ್ಧಿಸಿಕೊಳ್ಳಲು ಕಲಿಕಾ ಹಬ್ಬ ಸಹಕಾರಿ. ಇದನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಆಯಿಸ ರಿಬ್ಬನ್ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಸನ್ನ ಕುಮಾರ್, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಲೋಕೇಶ್, ಶಿಕ್ಷಕರಾದ ವಂಜಮ್ಮ, ರಮ್ಯಾ, ಗ್ರಾಮ ಪಂಚಾಯಿತಿ ಸದಸ್ಯರಾದ ಇಸ್ಮಾಯಿಲ್, ಐಸಮ್ಮ, ಗಪೂರ್, ಬಿಆರ್‌ಪಿ ಮಂಜುಳಾ ಚಿತ್ತಾಪುರ, ಸಿಆರ್‌ಪಿ ಸರಸ್ವತಿ, ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮೊಯಿದು ಕುಂಞಿ ಇತರರಿದ್ದರು.