ಕಲಿಕೆಗೆ ಉಪಯುಕ್ತ

CTD 21 VIDAYA VIKASA (1)----
Published on

ಚಿತ್ರದುರ್ಗ: ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಯೋಗ ಹೆಚ್ಚು ಉಪಯುಕ್ತವಾಗಿದೆ ಎಂದು ವಿದ್ಯಾವಿಕಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ವಿಜಯಕುಮಾರ್ ಹೇಳಿದರು.
ಸಂಸ್ಥೆಯಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ವರ್ಷವೀಡಿ ನಿರಂತರವಾಗಿ ಮಾಡಬೇಕು. ಇದರಿಂದ ಆರೋಗ್ಯ ಸುಧಾರಣೆ ಆಗಲಿದೆ ಎಂದರು. ಯೋಗ ಶಿಕ್ಷಕ ಮುರುಳಿ ಅವರನ್ನು ಸನ್ಮಾನಿಸಲಾಯಿತು.
ಮುಖ್ಯಶಿಕ್ಷಕ ಎನ್.ಜಿ.ತಿಪ್ಪೇಸ್ವಾಮಿ, ಐಸಿಎಸ್‌ಇ ಪ್ರಾಚಾರ‌್ಯ ಪಿ.ಬಸವರಾಜಯ್ಯ, ಸಂಸ್ಥೆ ನಿರ್ದೇಶಕ ಎಸ್.ಎಂ.ಪೃಥ್ವೀಶ್ ಇದ್ದರು. ಶಿಕ್ಷಕಿ ಬಿ.ಎಸ್.ಸುಚಿತಾ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net