ಕಲಿಕೆಗೆ ಪೂರಕ ವಾತಾವರಣ ನಿರ್ಮಿಸುವ ಜವಾಬ್ದಾರಿ ಶಿಕ್ಷಕರದ್ದು: ಬಿಇಒ

SGR WEB
Published on

ಸಾಗರ: ಮಕ್ಕಳ ಮನಸ್ಸನ್ನು ಅರಿತು, ಅವರ ಕಲಿಕೆಗೆ ಪೂರಕ ವಾತಾವರಣವನ್ನು ಶಿಕ್ಷಕರು ಕಲ್ಪಿಸಬೇಕು ಎಂದು ಬಿಇಒ ಕೆ.ಆರ್.ಬಿಂಬಾ ಹೇಳಿದರು.

ಬಿಇಒ ಕಚೇರಿ ಸಭಾಂಗಣದಲ್ಲಿ ಮುಖ್ಯಶಿಕ್ಷಕರು ಮತ್ತು ಶಿಕ್ಷಕರಿಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸುವ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಮಕ್ಕಳ ಶೈಕ್ಷಣಿಕ ಬದುಕಿನ ಮಹತ್ತರ ಘಟ್ಟ. ಈ ಹಂತದಲ್ಲಿ ಮನಸ್ಸು ಅತ್ಯಂತ ಸೂಕ್ಷ್ಮವಾಗಿರುತ್ತದೆ. ಅವರ ಮನಸ್ಸಿನ ಭಾವನೆಗಳನ್ನು ಶಿಕ್ಷಕರು ಅರಿತು ಪಠ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಇದಕ್ಕೆ ಶಿಕ್ಷಕರು ಮತ್ತು ಪಾಲಕರು ಸಹಕಾರ ನೀಡಬೇಕು ಎಂದು ಹೇಳಿದರು.

ಮನಶಾಸ್ತ್ರಜ್ಞ ಎಂ.ಎನ್.ಗಿರೀಶ್ ಮಾತನಾಡಿ, ಶಿಕ್ಷಕರು ಮಕ್ಕಳ ಸಮಸ್ಯೆ ಅರಿತು ಸೂಕ್ತ ಮಾರ್ಗದರ್ಶನ ನೀಡಿದರೆ ಯಶಸ್ಸು ಗಳಿಸಲು ಸಾಧ್ಯ. ಪ್ರತಿ ಮಗುವಿನ ಪ್ರಗತಿಯನ್ನು ಸಮೀಪದಿಂದ ನೋಡಿ ಅವರನ್ನು ಶಿಕ್ಷಣಕ್ಕೆ ಸಜ್ಜುಗೊಳಿಸಬೇಕು. ಮಕ್ಕಳ ಕಲಿಕಾ ಪ್ರಗತಿಯಲ್ಲಿ ಪಾಲಕರ ಪಾತ್ರ ಸಹ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net