

ತರೀಕೆರೆ: ಕಲಿತ ಶಾಲೆಯನ್ನು ವಿದ್ಯಾರ್ಥಿಗಳು ಸ್ಮರಿಸಿದಾಗ ಶಿಕ್ಷಕರ ಸೇವೆ ಸಾರ್ಥಕವಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಆರ್.ಅನಂತಪ್ಪ ಹೇಳಿದರು.
ಜೋಡಿಕೋಡಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಘದಿಂದ ಏರ್ಪಡಿಸಿದ್ದ ಶಾರದ ಪೂಜೆ ಮತ್ತು ಶಿಕ್ಷಕರ ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಇಲ್ಲಿ ಕಲಿತವರು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಈಗಿನ ತಲೆಮಾರಿನ ಪಾಲಕರಲ್ಲಿ ಸರ್ಕಾರಿ ಶಾಲೆಗಳ ಕುರಿತು ಕೀಳರಿಮೆ ಇದ್ದು, ಅದನ್ನು ತೊಡೆದುಹಾಕಬೇಕು. ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಿ ನೈತಿಕ ಮತ್ತು ಸಂಸ್ಕಾರಯುತ ಶಿಕ್ಷಣ ಕೊಡಿಸಬೇಕು ಎಂದರು.
ಗ್ರಾಪಂ ಸದಸ್ಯರಾದ ಎಚ್.ಟಿ.ಪ್ರದೀಪ್, ಟಿ.ಎಸ್.ಬಸವರಾಜಪ್ಪ, ಸುಧಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಸ್.ಧರಣೇಶ್, ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ವೆಂಕಟೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಚ್.ಲೋಕೇಶಪ್ಪ, ಮುಖ್ಯಶಿಕ್ಷಕ ಎಸ್.ಟಿ.ತಿಪ್ಪೇಶಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶಪ್ಪ, ಹಳೇ ವಿದ್ಯಾರ್ಥಿ ಸಂಘದ ಪ್ರಮುಖರಾದ ಅಕ್ಷಯ್, ಜಿ.ಅಜೇಯ್, ರಾಕೇಶ್, ಪ್ರಕಾಶ್, ಮಂಜುನಾಥ್ ಇತರರಿದ್ದರು.