ಕಲೆ, ಸಂಸ್ಕೃತಿಯ ಬಗ್ಗೆ ಯುವಜನರು ಆಸಕ್ತಿ ತೋರಲಿ:ಡಾ.ಎಚ್.ಎಲ್. ಮಲ್ಲೇಶಗೌಡ ಅಭಿಮತ

ಕಲೆ, ಸಂಸ್ಕೃತಿಯ ಬಗ್ಗೆ ಯುವಜನರು ಆಸಕ್ತಿ ತೋರಲಿ:ಡಾ.ಎಚ್.ಎಲ್. ಮಲ್ಲೇಶಗೌಡ ಅಭಿಮತ
Published on

ಹಾಸನ: ಕನ್ನಡದ ಕಲೆ ಮತ್ತು ಸಂಸ್ಕೃತಿ ಉಳಿಸಲು ಯುವಜನರು ಹೆಚ್ಚಿನ ಆಸಕ್ತಿ ತೋರಿಸಬೇಕಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್. ಮಲ್ಲೇಶಗೌಡ ಹೇಳಿದರು.
ನಗರದ ಹೊರವಲಯದ ಹಾಸನದ ಪಶು ವೈದ್ಯಕೀಯ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಗುರುವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸುಮಾರು 10 ಕಲಾಪ್ರಕಾರಗಳ ಪ್ರದರ್ಶನ ಏರ್ಪಡಿಸಲಾಗಿದ್ದು ಅಂತಾರಾಷ್ಟ್ರೀಯ ಭರತನಾಟ್ಯಪಟು ಉನ್ನತ್, ಚಲನಚಿತ್ರ ನಟರಾದ ರೇಖಾದಾಸ್ ಅವರ ತಂಡದಿಂದ ಕಿರು ನಾಟಕ. ಸಂಗೀತ ಅಕಾಡೆಮಿಯ ಮಾಜಿ ನಿರ್ದೇಶಕಿ ರಮ್ಯಾ ಸೂರಜ್ ಅವರಿಂದ ಸುಗಮ ಸಂಗೀತ ಹಾಗೂ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ವೆಂಕಟೇಶ್ ನಾಯ್ಡು, ಡಿವೈಎಸ್‌ಪಿ ಅಶೋಕ್, ವೈದ್ಯಕೀಯ ಕಾಲೇಜಿನ ಡೀನ್ ಶಿವಕುಮಾರ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ರಮೇಶ್, ಜಿಲ್ಲಾ ಸರ್ಜನ್ ಡಾ ಲೋಕೇಶ್, ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರಾನಾಥ್ ಹಾಗೂ ಚಲನಚಿತ್ರ ನಟ ಮನು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net