ಬೀದರ್: ಜಿಲ್ಲಾಡಳಿತದಿಂದ ಸೆ.17ರಂದು ಬೆಳಗ್ಗೆ 9ಕ್ಕೆ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪೌರಾಡಳಿತ ಸಚಿವ ರಹೀಮ್ಖಾನ್ ಅಧ್ಯಕ್ಷತೆ ವಹಿಸುವರು. ಸಂಸದ ಸಾಗರ್ ಖಂಡ್ರೆ ಸೇರಿದಂತೆ ಶಾಸಕರು, ಜನಪ್ರತಿನಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು. ಇದಕ್ಕೂ ಮುನ್ನ ಬೆಳಗ್ಗೆ 8.15ಕ್ಕೆ ಬಸವೇಶ್ವರ ವೃತ್ತದಿಂದ ಕ್ರೀಡಾಂಗಣ ವರೆಗೆ ಮೆರವಣಿಗೆ ನಡೆಯಲಿದೆ.