ಕಲ್ಯಾಣ ಕರ್ನಾಟಕ ಸಾರಿಗೆ ತಂಡ ರನ್ನರ್‌ಅಪ್

Nigama
Published on

ಕಲಬುರಗಿ: ಅಸೋಸಿಯೇಶನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್ಪೋರ್ಟ್ ಅಂಡರ್‌ಟೇಕಿಂಗ್‌ನಿಂದ ಅಹಮದಾಬಾದ್‌ನಲ್ಲಿ ಇತ್ತೀಚಿಗೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಂಡ ರನ್ನರ್‌ಅಪ್ ಸ್ಥಾನ ಪಡೆದಿದೆ.

ನಿಗಮದ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ತಂಡದ ಸದಸ್ಯರನ್ನು ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಅಭಿನಂದಿಸಿ ಮಾತನಾಡಿ, ರಾಷ್ಟ್ರಮಟ್ಟದ ಸಾರಿಗೆ ನಿಗಮಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ನಮ್ಮ ತಂಡ ರನ್ನರ್‌ಅಪ್ ಸಾಧನೆ ಮಾಡಿರುವುದು ಖುಷಿ ತಂದಿದೆ. ಇಡೀ ನಿಗಮಕ್ಕೆ ಕೀರ್ತಿ ತಂದಿದೆ ಎಂದು ಹೇಳಿದರು.

ವಾಲಿಬಾಲ್ ತಂಡದ ವ್ಯವಸ್ಥಾಪಕರಾಗಿ ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಮಹಿಪಾಲ್ ಬೇಗಾರ್, ಉಪ ವ್ಯವಸ್ಥಾಪಕರಾಗಿ ನಿಗಮದ ಕೇಂದ್ರ ಕಚೇರಿ ಸಿಬ್ಬಂದಿ ಮೇಲ್ವಿಚಾರಕ ನಾಗರಾಜ ಮಠ ಕಾರ್ಯನಿರ್ವಹಿಸಿದರು. ಅಮೀರ್ ಅಲಿಖಾನ್ ತರಬೇತಿ ನೀಡಿದ್ದಾರೆ.

ಮುಖ್ಯ ಸಂಚಾರ ವ್ಯವಸ್ಥಾಪಕ ವಿ.ಎಚ್.ಸಂತೋಷಕುಮಾರ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆಡಳಿತ ಸಲಹೆಗಾರ ಪಿ.ಎಸ್. ಬಸವರಾಜ, ಸಿಬ್ಬಂದಿ ಮುಖ್ಯ ವ್ಯವಸ್ಥಾಪಕ ಕೆ.ಎಂ.ಅಶ್ರಫ್, ವ್ಯವಸ್ಥಾಪಕ ನಿರ್ದೇಶಕರ ಆಪ್ತ ಕಾರ್ಯದರ್ಶಿ ಪ್ರಭುಲಿಂಗ ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net