ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

15-08jvg01
ಜೇವರ್ಗಿಯಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಶಾಸಕ ಡಾ.ಅಜಯಸಿಂಗ್ ಧ್ವಜವಂದನೆ ಸ್ವೀಕರಿಸಿದರು. ತಹಸೀಲ್ದಾರ್ ರಾಜೇಶ್ವರಿ ಪಿ.ಎಸ್., ಟಿಎಚ್‌ಒ ಡಾ.ಸಿದ್ದು ಪಾಟೀಲ್ ಇದ್ದರು.
Published on

ಜೇವರ್ಗಿ: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರೂ ಆದ ಶಾಸಕ ಡಾ.ಅಜಯಸಿಂಗ್ ಹೇಳಿದರು.

ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ೭೬ನೇ ಸ್ವಾತಂತ್ರ್ಯಯ ದಿನಾಚರಣೆಯಲ್ಲಿ ಮಾತನಾಡಿ, ಹಿಂದಿನ ಸರ್ಕಾರದಲ್ಲಿ ಕ್ಷೇತ್ರಕ್ಕೆ ಹೇಳಿಕೊಳ್ಳುವಷ್ಟು ಅನುದಾನ ಬಂದಿಲ್ಲ. ಹೀಗಾಗಿ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಇದೀಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೊಳಿಸಲಾಗುವುದು. ಮಾದರಿ ಕ್ಷೇತ್ರವನ್ನಾಗಿ ನಿರ್ಮಿಸುವಲ್ಲಿ ಶ್ರಮಿಸುವೆ ಎಂದು ಭರವಸೆ ನೀಡಿದರು.

ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ್ ಉಪನ್ಯಾಸ ನೀಡಿದರು.

ತಹಸೀಲ್ದಾರ್ ರಾಜೇಶ್ವರಿ ಪಿ.ಎಸ್., ಡಾ.ಸಿದ್ದು ಪಾಟೀಲ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹಳೆಪ್ಪಚಾರ್ಯ ಜೋಶಿ, ನೌಕರರ ಸಂಘದ ತಾಲೂಕು ಅಧ್ಯಕ್ಷ ಗುಡುಲಾಲ್ ಶೇಖ್, ತಾಪಂ ಇಒ ಅಬ್ದುಲ್ ನಬಿ, ಸಿಪಿಐ ಪರಶುರಾಮ ವನಂಜೆಕರ್, ಪುರಸಭೆ ಮುಖ್ಯಾಧಿಕಾರಿ ಸಂಗೀತಾ, ಅಧಿಕಾರಿಗಳಾದ ಅಶೋಕ ನಾಯಕ, ಡಾ.ಶೋಭಾ ಸಜ್ಜನ್, ಸುಮಂಗಲಾ ಹೂಗಾರ, ಗುರುಶಾಂತಪ್ಪ ಚಿಂಚೋಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net