ಕಲ್ಯಾಣ ಪರ್ವ ಪೂರ್ವ ಭಾವಿ ಸಭೆ 31ಕ್ಕೆ

Maate Gangadevi-1
Published on

ಬೀದರ್: ಬಸವಕಲ್ಯಾಣದ ಬಸವ ಧರ್ಮ ಪೀಠದ ಬಸವ ಮಹಾ ಮನೆಯಲ್ಲಿ ಆ.31ರಂದು ಬೆಳಿಗ್ಗೆ 11ಕ್ಕೆ 21ನೇ ಕಲ್ಯಾಣ ಪರ್ವದ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ ಎಂದು ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಜಗದ್ಗುರು ಡಾ. ಮಾತೆ ಗಂಗಾದೇವಿ ತಿಳಿಸಿದ್ದಾರೆ.

ಬಸವಕಲ್ಯಾಣದಲ್ಲಿ ಅಕ್ಟೋಬರ್ 8, 9 ಮತ್ತು 10 ರಂದು ನಡೆಯಲಿರುವ ಕಲ್ಯಾಣ ಪರ್ವದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಹಾಗೂ ಅಕ್ಕ ನಾಗಲಾಂಬಿಕಾ ಮಹಿಳಾ ಗಣದ ಪದಾಧಿಕಾರಿಗಳು ಹಾಗೂ ಬಸವ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಲ್ಯಾಣ ಪರ್ವವನ್ನು ಅಚ್ಚುಕಟ್ಟಾಗಿ ಸಂಘಟಿಸಲು ತಮ್ಮ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಕೋರಿದ್ದಾರೆ.
ಲಿಂಗಾನಂದ ಸ್ವಾಮೀಜಿ ಜಯಂತಿ: ಅಂದು ಬಸವ ಧರ್ಮ ಪೀಠದ ಪ್ರಥಮ ಪೀಠಾಧ್ಯಕ್ಷರಾದ ಪ್ರವಚನ ಪಿತಾಮಹ ಲಿಂಗಾನಂದ ಸ್ವಾಮೀಜಿ ಅವರ ಜಯಂತಿಯನ್ನು ರಾಷ್ಟ್ರೀಯ ಬಸವ ದಳದ ಜನ್ಮದಿನವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net