ಕಲ್ಯಾಣದಲ್ಲಿ ಕರೊನಾ ಚಿಕಿತ್ಸೆಗೆ ಸಿದ್ಧತೆ

20BK3
Published on

ಬಸವಕಲ್ಯಾಣ: ತಾಲೂಕಿನಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿಯೇ ಕರೊನಾ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್-19 ಆಸ್ಪತ್ರೆ ಆರಂಭಿಸುವ ಕುರಿತ ಸಿದ್ಧತೆ ಪರಿಶೀಲಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿವೆ. ಆದ್ದರಿಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದರು. ಕನಿಷ್ಟ 70 ಸೋಂಕಿತರಿಗೆ ಚಿಕಿತ್ಸೆ ನೀಡುವ ಸಾಮಥ್ರ್ಯದ ಬೆಡ್ಗಳನ್ನು ಸಿದ್ಧಪಡಿಸಬೇಕು. ಕೋವಿಡ್ ಸೋಂಕಿತರಿಗೆ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರದ ವ್ಯವಸ್ಥೆ ಮಾಡಬೇಕು. ಸಾಮಾನ್ಯ ರೋಗಿಗಳೊಂದಿಗೆ ಸೋಂಕಿತರ ಸಂಪರ್ಕ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬೇಕಾಗುವ ವೈದ್ಯರು, ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆಗಳ ಕುರಿತು ವರದಿ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಬೇಕು. ಕರೊನಾ ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಜತೆಗೆ ಸೋಂಕಿಗೆ ಒಳಗಾದ ಒಬ್ಬ ವ್ಯಕ್ತಿಯೂ ಮರಣ ಹೊಂದದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕರೊನಾ ಸೋಂಕಿತರ ಚಿಕಿತ್ಸೆಗಾಗಿ ನಾಲ್ಕು ವಾರ್ಡ್​ಗಳಲ್ಲಿ 44 ಬೆಡ್ ಸಿದ್ಧಪಡಿಸಲಾಗಿದೆ. ಉಳಿದ ಬೆಡ್ಗಳನ್ನು ಶೀಘ್ರದಲ್ಲಿ ಸಿದ್ಧಪಡಿಸಲಾಗುವುದು ಎಂದು ಡಾ.ಅಪರ್ಣಾ ಮಹಾನಂದ ಮಾಹಿತಿ ನೀಡಿದರು.
ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಡಿಎಚ್ಒ ಡಾ.ವಿ.ಜಿ.ರೆಡ್ಡಿ, ಸಹಾಯಕ ಆಯುಕ್ತ ಭಂವರಸಿಂಗ್ ಮೀನಾ, ಎಸಿ ಅಕ್ಷಯ ಶ್ರೀಧರ, ಬಿಕೆಡಿಬಿ ಆಯುಕ್ತ ಶರಣಬಸಪ್ಪ ಕೊಟ್ಟಪ್ಪಗೋಳ, ತಹಸೀಲ್ದಾರ್ ಸಾವಿತ್ರಿ ಸಲಗರ, ಟಿಎಚ್ಒ ಡಾ.ಶರಣಪ್ಪ ಮುಡಬಿ, ಇಒ ಮಡೋಳಪ್ಪ ಪಿ.ಎಸ್, ನಗರಸಭೆ ಪೌರಾಯುಕ್ತೆ ಮೀನಾಕುಮಾರಿ ಬೋರಾಳಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net