ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು

Published on

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಯಡಪುರ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯ ನಿವಾಸಿ ರಾಜೇಶ್ (28) ಮೃತದುರ್ದೈವಿ. ಈತ ಮಂಗಳವಾರ ರಾತ್ರಿ ತೆರಕಣಾಂಬಿ ಕಡೆಯಿಂದ ಚಾಮರಾಜನಗರ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವೇಳೆ, ನಿಯಂತ್ರಣ ತಪ್ಪಿ ಕಲ್ಲಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಚಾಲಕನಿಗೆ ತೀವ್ರವಾದ ಪೆಟ್ಟಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ನಡೆದ ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರನ್ನು ವಶಕ್ಕೆ ಪಡೆದುಕೊಂಡು ಮೃತ ದೇಹವನ್ನು ಸಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net