ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ

Screenshot_20201116-090926_Google
Published on

ವಿಜಯಪುರ: ಪಾಡ್ಯಮಿ ದಿನದಂದೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದದಲ್ಲಿ ತಡರಾತ್ರಿ ನಡೆದಿದೆ. ನಿಡಗುಂದಿ ನಿವಾಸಿ ತಿಪ್ಪಣ್ಣ ಗೊಂಧಳಿ(36) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ತಿಪ್ಪಣ್ಣ ಗೊಂಧಳಿ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಹಣಕಾಸಿನ ವ್ಯವಹಾರ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕುಡಿದ ಮತ್ತಿನಲ್ಲಿ ಆಗಿರುವ ಜಗಳದಲ್ಲಿ ಕೊಲೆ‌ ಆಗಿರಬಹುದು ಎಂದು ಅಂದಾಜಿಸಲಾಗಿದೆ. ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪಿ ಎಸ್ ಐ ಸಿ. ಬಿ. ಚಿಕ್ಕೋಡಿ ಹಾಗೂ ತಂಡ ಭೇಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net