ಕಲ್ಲು ತೂರಾಟದ ಹಿಂದೆ ಪ್ರತಾಪ್ ಸಿಂಹ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ

mysore
Published on

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ಹಿಂದೆ ಇರೋದು ಮಾಜಿ ಸಂಸದ ಪ್ರತಾಪ್ ಸಿಂಹ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರಿದರು.

ಉದಯಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಹೇಳನಕಾರಿ ಪೋಸ್ಟ್ ಹಾಕಿರುವ ಸುರೇಶ್ ಅಲಿಯಾಸ್ ಸತೀಶ್ ಕಟ್ಟಾ ಪ್ರತಾಪ್ ಸಿಂಹ ಬೆಂಬಲಿಗ. ಆರ್‌ಎಸ್‌ಎಸ್ ಕಾರ್ಯಕರ್ತ. ಪ್ರತಾಪ್ ಸಿಂಹ ಓಡಿ ಹೋಗುವ ಮುನ್ನ ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಾಪ್ ಸಿಂಹಗೆ ಏಕೆ ಮುಸ್ಲಿಮರ ಮೇಲೆ ಅಷ್ಟು ಕೋಪ. ಮುಸ್ಲಿಮರು ಈ ದೇಶದ ಮಣ್ಣಿನ ಮಕ್ಕಳು. ಅವರೇನು ಹೊರದೇಶದಿಂದ ಬಂದಿದ್ದಾರಾ ಎಂದು ಪ್ರಶ್ನಿಸಿದರು.

ಈ ಗಲಾಟೆ ಹಿಂದೆ ಬಿಜೆಪಿ, ಆರ್‌ಎಸ್‌ಎಸ್ ಕೈವಾಡ ಇದೆ. ವೇಷ ಬದಲಾಯಿಸಿಕೊಂಡು ಬಂದು ಗುಂಪಿನ ಜತೆಗೆ ಸೇರಿಕೊಂಡು ಕಲ್ಲು ತೂರಾಟ ಮಾಡಿದ್ದಾರೆ. ಇದಕ್ಕಾಗಿ 300 ಜನ ಆರ್‌ಎಸ್‌ಎಸ್‌ನವರು ಮೈಸೂರಿಗೆ ಬಂದಿದ್ದಾರೆ. ಯಾರೇ ಕಲ್ಲು ತೂರಾಟ ಮಾಡಿದರೂ ಕಂಡಲ್ಲಿ ಗುಂಡು ಹಾರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಆಶಾಂತಿ ಸೃಷ್ಟಿಸುವುದು ಬಿಜೆಪಿಯವರ ಉದ್ದೇಶ. ಬಿಜೆಪಿಯ ಯಾವ ನಾಯಕರನ್ನು ಇಲ್ಲಿಗೆ ಬರಲು ಬಿಡಬಾರದು. ಯಾವ ಕಾರಣಕ್ಕೆ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಇಲ್ಲಿಗೆ ಬರಬೇಕು.

ಅವರೇ, ಕಾಂಗ್ರೆಸ್ ನಾಯಕರು ಹಾಗೂ ಮುಸ್ಲಿಂ ಧರ್ಮದ ವಿರುದ್ಧ ಪೋಸ್ಟರ್ ಹಾಕಿ, ಅವರೇ ಕಾಂಗ್ರೆಸ್ ಪಕ್ಷ ಮತ್ತು ಮುಸ್ಲಿಂರನ್ನು ಬೈಯುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net