ಕಳಂಕಿತ ಅಧಿಕಾರಿಗಳನ್ನು ಶಾಶ್ವತವಾಗಿ ಅಮಾನತುಗೊಳಿಸಿ

Suspend the tainted officials forever
ವಿಜಯಪುರ ಜಿಲ್ಲಾಡಳಿತಕ್ಕೆ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಅಮಿದ್ ಇನಾಮದಾರ ಇದ್ದಾರೆ.
Published on

ವಿಜಯಪುರ: ಕೇರಳದ ಸೈಬರ್ ಅಪರಾಧ ತನಿಖೆಗಾಗಿ ತೆರಳಿದ ರಾಜ್ಯದ ಪೊಲೀಸ್ ಅಧಿಕಾರಿಗಳನ್ನು ಶಾಶ್ವತವಾಗಿ ಅಮಾನತುಗೊಳಿಸಲು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿದ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ರಾಜ್ಯದ ಪೊಲೀಸರು ಸೈಬರ್ ಅಪರಾಧದ ತನಿಖೆಗಾಗಿ ಕೇರಳ ರಾಜ್ಯಕ್ಕೆ ತೆರಳಿ ಆರೋಪಿಗಳಿಂದ ಹಣಕ್ಕೆ ಬೇಡಿಕೆ ಇಟ್ಟುರುವುದು ಬೆಳಕಿಗೆ ಬಂದಿದೆ. ಮಾತ್ರವಲ್ಲ, ಕೇರಳದ ಪೊಲೀಸ್‌ರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಹೀಗಾಗಿ ರಾಜ್ಯದ ಪೊಲೀಸ್ ಇಲಾಖೆಗೆ ಕಳಂಕ ತಂದಿರುವ ಕಳಂಕಿತ ಪೊಲೀಸರನ್ನು ಶಾಶ್ವತವಾಗಿ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.

ಇಂಥ ಭ್ರಷ್ಟ ಪೊಲೀಸರು ರಾಜ್ಯದಲ್ಲಿ ಸಾಕಷ್ಟು ಜನರಿದ್ದಾರೆ. ಗೃಹ ಇಲಾಖೆ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು. ಇಂತ ಭ್ರಷ್ಟರಿಂದ ನಿಷ್ಠಾವಂತ ಅಧಿಕಾರಿಗಳ ಹೆಸರು ಸಹ ಕೆಡುತ್ತಿದೆ. ಮಾತ್ರವಲ್ಲ, ರಾಜ್ಯದ ಹೆಸರು ಮಣ್ಣು ಪಾಲಾಗುತ್ತಿದೆ ಎಂದರು.
ಮುಖಂಡರಾದ ಪ್ರವೀಣ ಕನಸೆ, ಅಮಿದ್ ಇನಾಮದಾರ, ಪ್ರಕಾಶ ಪಾಟೀಲ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net