ಕಳಪೆ ಕಾಮಗಾರಿ, ದೂರು

veereshreddy
Published on

ಹುಮನಾಬಾದ್: ತಾಲೂಕಿನ ಹಳ್ಳಿಖೇಡ್ (ಬಿ) ಪುರಸಭೆಯ ನಗರ ಉದ್ಯಾನ ಯೋಜನೆ ಅಡಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿ ಕಳಪೆಯಾಗಿವೆ ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ವೀರೇಶರೆಡ್ಡಿ ಬೋತಗಿಕರ್ ದೂರಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ದೂರು ಸಲ್ಲಿಸಿ, ನಗರ ಉದ್ಯಾನ ಯೋಜನೆಯಡಿಯಲ್ಲಿ 8.90 ಕೋಟಿ ರೂ. ಅನುದಾನದಲ್ಲಿ ಸಿಸಿ ರಸ್ತೆ, ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿವೆ. ಪುರಸಭೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕೈಜೋಡಿಸಿ ಸರ್ಕಾರದ ಅನುದಾನ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net