

ಶ್ರೀರಂಗಪಟ್ಟಣ: ಇಲ್ಲಿನ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, 52 ಗ್ರಾಂ ಚಿನ್ನ ಹಾಗೂ 4 ಕೆಜಿ 350 ಗ್ರಾಂ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ.
ಶ್ರೀರಂಗಪಟ್ಟಣ ಸೇರಿದಂತೆ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮಗಳಲ್ಲಿ ನಡೆದಿದ್ದ ಮನೆಗಳ ಸರಣಿ ಕಳ್ಳತನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, 5.83 ಲಕ್ಷ ರೂ. ಮೌಲ್ಯದ 52 ಗ್ರಾಂ ಚಿನ್ನಾಭರಣ ಹಾಗೂ 4 ಕೆ.ಜಿ ಬೆಳ್ಳಿಯ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಮುರಳಿ ಅವರ ನಿರ್ದೇಶನದಲ್ಲಿ ಇನ್ಸ್‌ಪೆಕ್ಟರ್ ಬಿ.ಎಸ್.ಪ್ರಕಾಶ್ ಹಾಗೂ ಪಿಎಸ್‌ಐ ಶಿವಲಿಂಗ ದಳವಾಯಿ ನೇತೃತ್ವದಲ್ಲಿ ಸಿಬ್ಬಂದಿ ಭಾಗಿಯಾಗಿದ್ದರು.