ಮೈಸೂರು: ಮನೆಗಳ್ಳನನ್ನು ಬಂಧಿಸಿರುವ ನಗರ ಅಪರಾಧ ಪತ್ತೆ ದಳ ಪೊಲೀಸರು, ಬಂಧಿತನಿಂದ 4.7 ಲಕ್ಷ ರೂ. ವೌಲ್ಯದ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ, ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಮನೆಕಳ್ಳತನ ಮತ್ತು ದ್ವಿಚಕ್ರವಾಹನ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾನೆ.
ಬಂಧಿತನಿಂದ 53 ಗ್ರಾಂ ಚಿನ್ನದ ಆಭರಣಗಳು, 1.5 ಕೆ.ಜಿ ತೂಕದ ಬೆಳ್ಳಿಯ ಪದಾರ್ಥ, ಒಂದು ಟಿವಿಎಸ್, ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಮೈಸೂರು ನಗರ ಆಲನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಮನೆಕಳ್ಳತನ ಮತ್ತು ಮಂಡ್ಯದಲ್ಲಿ ಎರಡು ಮನೆಗಳ್ಳತನ, ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಒಂದು ದ್ವಿಚಕ್ರವಾಹನ ಕಳ್ಳತನ ಪ್ರಕರಣ ಪತ್ತೆಯಾಗಿದೆ.