ಕಸಾಪ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಸಾಪ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ
Published on

ಹಾಸನ: 78ನೇ ಸ್ವಾತಂತ್ರ ದಿನಾಚರಣೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ಈ ವೇಳೆ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬ್ರಿಟಿಷರ ಆಡಳಿತದಿಂದ ದೇಶ ಸ್ವಾತಂತ್ರ್ಯ ಹೊಂದಲು ನಮ್ಮ ಮಹನೀಯರು ಶ್ರಮಿಸಿದ್ದಾರೆ. ಅದನ್ನು ಮನದಲ್ಲಿಟ್ಟುಕೊಂಡು ನಾವು ಮುನ್ನಡೆಯಬೇಕಿದೆ ಎಂದರು.
ಯುವ ಜನತೆ ಸ್ವಾತಂತ್ರ್ಯದ ಮಹತ್ವ ಅರಿಯಬೇಕು. ಒಟ್ಟಾಗಿ ಮುನ್ನಡೆದು ಸದೃಢ ದೇಶ ಕಟ್ಟುವತ್ತ ಹೆಜ್ಜೆ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳು ನಮಗೆ ಅಷ್ಟೊಂದು ಹಿತವಿರಲಾರವು ಎಂದು ಕಿವಿ ಮಾತು ಹೇಳಿದರು.
ಈ ವೇಳೆ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ, ಸಂಘಟನಾ ಕಾರ್ಯದರ್ಶಿ ಆರ್.ಬಿ ಶಂಕರ್, ಚಂದ್ರಶೇಖರ್, ಸಹ ಕಾರ್ಯದರ್ಶಿ ನಾಗೇಶ್, ಜಿಲ್ಲಾ ಎಲೆಕ್ಟ್ರಾನಿಕ್ ವಸ್ತುಗಳ ರಿಪೇರಿದಾರರ ಸಂಘದ ಅಧ್ಯಕ್ಷ ಪವನ್ ಕುಮಾರ್, ಗೌರವಾಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಯೋಗೇಶ್, ಜ್ಞಾನಧಾರೆ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಮಧುಸೂದನ್ ಸಿಬ್ಬಂದಿ ವರ್ಗದವರು, ಪರಿಷತ್ತಿನ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net