ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾದರೆ ಕ್ರಮ

19-33
ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಮಹಾಂತೇಶ ಕೌಜಲಗಿ ಭೂಮಿ ಪೂಜೆ ನೆರವೇರಿಸಿದರು. ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಸದಸ್ಯ ಅರ್ಜುನ ಕಲಕುಟಕರ ಇತರರಿದ್ದರು.
Published on

ಬೈಲಹೊಂಗಲ, ಬೆಳಗಾವಿ: ಗುತ್ತಿಗೆದಾರ ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಸೂಚನೆ ನೀಡಿದರು. ಪಟ್ಟಣದ ವಾರ್ಡ್ ನಂ.11ರ ಆಂಟಿನ ಚಾಳದಲ್ಲಿ 12 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಧಿಕಾರಿಗಳು ಕಾಮಗಾರಿ ಕುರಿತು ಹೆಚ್ಚಿನ ನಿಗಾವಹಿಸಬೇಕು. ಕಾಮಗಾರಿ ಗುಣಮಟ್ಟವನ್ನು ಆಗಾಗ ಪರಿಶೀಲಿಸಬೇಕು. ಕಾಮಗಾರಿಗಳು ಕಳಪೆ ಮಟ್ಟದ್ದಾಗಿದ್ದರೆ ಯಾವುದೇ ಸಂದರ್ಭದಲ್ಲಿಯೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಸೂಚಿಸಿದರು. ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಹಂತ ಹಂತವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದರು. ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಮಾತನಾಡಿ, ಶಾಸಕ ಮಹಾಂತೇಶ ಕೌಜಲಗಿ ನೇತೃತ್ವದಲ್ಲಿ ಪುರಸಭೆಯ ಎಲ್ಲ ವಾರ್ಡ್‌ಗಳಲ್ಲಿ ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು. ಪುರಸಭೆ ಸದಸ್ಯ ಅರ್ಜುನ ಕಲಕುಟಕರ, ಎಇಇ ಆರ್.ಜಿ.ಯಲಿಗಾರ, ಗುತ್ತಿಗೆದಾರ ಕುಶಾಲ ದೇವಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net