ಕಾಂಗ್ರಸ್ ಸರ್ಕಾರಿಂದ ರೈತರಿಗೆ ವಂಚನೆ ಆರೋಪ

ಕಾಂಗ್ರಸ್ ಸರ್ಕಾರಿಂದ ರೈತರಿಗೆ ವಂಚನೆ ಆರೋಪ
Published on

ಹಾಸನ: ರೈತರ ಹೆಸರನ್ನು ಹೇಳಿಕೊಂಡು ಅಧಿಕಾರಕ್ಕೆ ಬಂದಂತಹ ಎಲ್ಲಾ ಸರ್ಕಾರಗಳು ರೈತರಿಗೆ ವಂಚನೆ ಮಾಡಿವೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಅಗಿಲೆ ಯೋಗೀಶ್ ಆರೋಪಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪೂರ್ಣ ಬರ ಆವರಿಸಿದೆ. ಮಳೆ ಇಲ್ಲದೆ ಬೆಳೆಗಳು ಸಂಪೂರ್ಣವಾಗಿ ಒಣಗಿ ರೈತ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಯಾವುದೇ ಜಲಾಶಯಗಳು ಕೂಡ ಭರ್ತಿಯಾಗಿಲ್ಲ. ಹೀಗಿದ್ದರು ಸಹ ರಾಜ್ಯಸರಕಾರ ನಮ್ಮ ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದು ನಮ್ಮ ರಾಜ್ಯದ ರೈತರಿಗೆ ಸರ್ಕಾರ ಮಾಡುತ್ತಿರುವ ವಂಚನೆ ಎಂದು ಕಿಡಿಕಾರಿದ್ದರು.

ಬಿಜೆಪಿ ಪಕ್ಷದವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಪ್ರಶ್ನಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಇದ್ದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಹಾಗೂ ತಮಿಳುನಾಡು ಈ ಎರಡು ರಾಜ್ಯಗಳ ನಡುವೆ ಮಧ್ಯಸ್ತಿಕೆ ವಹಿಸಿ ಕರ್ನಾಟಕದ ರಾಜ್ಯಗಳ ಪರಿಸ್ಥಿತಿಯನ್ನು ಅರಿವು ಮೂಡಿಸುವ ಕೆಲಸ ಮಾಡಹಬಹುದಿತ್ತು. ಆದರೆ ರಾಜ್ಯ ಬಿಜೆಪಿ ನಾಯಕರು ಈ ಕೆಲಸ ಮಾಡಲಿಲ್ಲ. ಹೀಗಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು.

ಡಿ.ಕೆ ಶಿವಕುಮಾರ್ ರೈತರಲ್ಲ ಅವರೊಬ್ಬ ಉದ್ಯಮಿ, ರೈತರ ಕಷ್ಟಗಳು ಅವರಿಗೆ ಗೊತ್ತಿಲ್ಲ. ರೈತರ ಸಂಘಟನೆಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೇಳಿಕೆಗಳು ಮಿತಿಯಲ್ಲಿ ಇರಬೇಕು. ಅಧಿಕಾರಕ್ಕೆ ಬರುವ ಸರ್ಕಾರಗಳು ರೈತರ ಬಗ್ಗೆ ಕಾಳಜಿ ಇರುವಂತೆ ಮಾತನಾಡಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುತ್ತಾರೆ. ನಂತರ ರೈತರನ್ನಿ ಹಿನಾಯಪರಿಸ್ಥಿತಿಯಲ್ಲಿ ಕಾಣುತ್ತಾರೆ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಸುಂದರೇಶ್, ನಜೀರ್ ಆಹ್ಮದ್, ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net