ಕಾಂಗ್ರೆಸಿಗರ ಮೇಲೆ ಕೇಸ್‌ಗಳಿಲ್ಲವೆ?

KLB CTPR (7)
Published on

ಚಿತ್ತಾಪುರ: ದೇಶದಲ್ಲಿ ಕಾಂಗ್ರೆಸ್ ಕಣ್ಮರೆಯಾಗಿದ್ದು, ಇದೀಗ ರಾಜ್ಯದಲ್ಲೂ ಕೈ ಪಾರ್ಟಿಯನ್ನು ಬೇರು ಸಮೇತ ಕಿತ್ತೆಸೆಯಬೇಕಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರನ್ನು ಗಲ್ಲಿಸಿ ಕಾಂಗ್ರೆಸಿಗರಿಗೆ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
ಪಟ್ಟಣದ ಅಕ್ಕಮಹಾದೇವಿ ಮಂದಿರದಿAದ ಭುವನೇಶ್ವರ ವೃತ್ತದವರೆಗೂ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದ ಅವರು, ಮಣಿಕಂಠ ರಾಠೋಡ್ ಅವರ ಮೇಲೆ ಪ್ರಕರಣಗಳಿದ್ದು, ಇಂತಹ ವ್ಯಕ್ತಿ ಪರ ಮುಖ್ಯಮಂತ್ರಿ ಪ್ರಚಾರ ಮಾಡುವುದು ದುರಂತ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಆದರೆ ಕಾಂಗ್ರೆಸ್‌ನ ರಾಷ್ಟಿçÃಯ, ರಾಜ್ಯದ ನಾಯಕರ ಮೇಲೆ ಸಾಕಷ್ಟು ಕೇಸ್‌ಗಳಿವೆ. ಸ್ವತಃ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರೇ ತಿಹಾರ್ ಜೈಲಿಗೆ ಹೋಗಿ ಬಂದಿದ್ದು, ಇದೀಗ ಬೇಲ್ ಮೇಲೆ ಹೊರಗೆ ತಿರುಗುತ್ತಿದ್ದಾರೆ. ನಿಮ್ಮ ನಾಯಕರ ಮೇಲಿರುವ ಕೇಸ್‌ಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷ ಸಂಪೂರ್ಣ ವಿಸರ್ಜನೆ ಮಾಡಬೇಕು ಎಂದು ತಿರುಗೇಟು ನೀಡಿದರು.
ನಟಿ ಶ್ರುತಿ ಮಾತನಾಡಿ, ಚಿತ್ತಾಪುರ ಮತಕ್ಷೇತ್ರದ ಜನರ ಪ್ರೀತಿ, ಅಭಿಮಾನ ನೋಡಿದರೆ ಪಕ್ಷದ ಅಭ್ಯರ್ಥಿ ಮಣಿಕಂಠ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
ಸುರಪುರ ಶಾಸಕ ನರಸಿಂಹ ನಾಯಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ. ಪಾಟೀಲ್, ಪ್ರಮುಖರಾದ ಲಿಂಗಾರೆಡ್ಡಿ ಭಾಸರೆಡ್ಡಿ, ಬಸವರಾಜ ಬೆಣ್ಣೂರಕರ್, ಸೋಮಶೇಖರ ಪಾಟೀಲ್, ಮಲ್ಲಿಕಾರ್ಜುನ ಎಮ್ಮೆನೂರ್, ವಿಠ್ಠಲ್ ನಾಯಕ, ಧರ್ಮಣ್ಣ ಇಟಗಾ, ಚಂದ್ರಶೇಖರ ಅವಂಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net