

ಮದ್ದೂರು: ನಗರದ ಶಿವಪುರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶಾಸಕ ಕೆ.ಎಂ.ಉದಯ್ ದೀಪಾವಳಿ ಹಬ್ಬವನ್ನು ಸೋಮವಾರ ಕಾರ್ಯಕರ್ತರೊಂದಿಗೆ ಆಚರಿಸಿದರು.
ಬೆಳಗ್ಗೆಯಿಂದಲೇ ಕಚೇರಿಯಲ್ಲಿ ನಗರದ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧನಲಕ್ಷ್ಮೀ ಪೂಜೆ ನೆರವೇರಿಸಲಾಯಿತು. ಬಳಿಕ ಕಾರ್ಯಕರ್ತರಿಗೆ ಸಿಹಿ ಹಂಚಿ, ಕಚೇರಿಯ ಮುಂದೆ ಪಟಾಕಿ ಹಚ್ಚಿ ಸಂಭ್ರಮಿಸಿದರು.
ಶಾಸಕ ಕೆ.ಎಂ.ಉದಯ್ ಮಾತನಾಡಿ, ತಾಲೂಕಿನ ಜನತೆಗೆ ಶುಭವಾಗಲೆಂದು ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.
ಸಮಾಜ ಸೇವಕಿ ವಿನುತಾ ಕೆ.ಎಂ.ಉದಯ್, ತಾಲೂಕು ಬಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ನಗರಸಭಾ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸದಸ್ಯ ಸಿದ್ದರಾಜು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಇದ್ದರು.