ಕಾಂಗ್ರೆಸ್ ಕಚೇರಿಯಲ್ಲಿ ರಮಾನಾಥ ರೈ- ಯುವ ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ

congress
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಬಿ.ರಮಾನಾಥ ರೈ ಹಾಗು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು, ರೈ ಅವರನ್ನು ತಳ್ಳುವ ತನಕ ಮುಂದುವರಿಯಿತು.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ಅವಕಾಶ ನಿರಾಕರಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿತ್ತು. ಏಕಾಏಕಿ ನಿರ್ಧಾರ ಕೈಗೊಂಡು ಜಾಥಾ ನಡೆಸಿದ ವಿಚಾರದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಸಮಾಧಾನ ವ್ಯಕ್ತಪಡಿಸಿದರು. ಆಗ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ರಮಾನಾಥ ರೈ ನಡುವೆ ವಾಗ್ವಾದ ನಡೆದು ಅವರನ್ನು ತಳ್ಳುವ ತನಕ ಮುಂದುವರಿಯಿತು.

ವಾಗ್ವಾದ ನಡೆಸಿದವರನ್ನು ಸಭಾಂಗಣದಿಂದ ಹೊರ ಹೋಗುವಂತೆ ಹಿರಿಯ ನಾಯಕರು ಸೂಚಿಸಿದರು. ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮೊದಲಾದವರು ಸಮಾಧಾನ ಪಡಿಸಿದ ಬಳಿಕ ಪ್ರಕರಣ ಸುಖಾಂತ್ಯವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net