ಕಾಂಗ್ರೆಸ್ ಕಾರ್ಯಕರ್ತರರಕ್ಷಿಸುವ ಹುನ್ನಾರ

01ydg07
Published on

ಯಾದಗಿರಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಶಹಾಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಡೆದಿದ್ದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಸಿದಂತೆ ಪೊಲೀಸರು ಏಕಪಕ್ಷೀಯ ನಡೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಡಿವೈಎಸ್ಪಿ ಮಂಜುನಾಥಗೆ ಮನವಿ ಸಲ್ಲಿಸಿದರು.
ಯುವ ನಾಯಕ ಅಮೀನರಡ್ಡಿ ಯಾಳಗಿ ಮಾತನಾಡಿ, ಮತದಾನದ ದಿನದಂದು ಕೆಂಭಾವಿ ಪಟ್ಟಣದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮಾರಿ ನಡೆದಿತ್ತು. ಎರಡೂ ಕಡೆಗಳಿಂದಲೂ ಕೆಂಭಾವಿ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೆ, ಅಲ್ಲಿನ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಖಲಾದ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾದ ಪ್ರಕರಣದ ವರದಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಿದ ಠಾಣಾಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರ ಬಗ್ಗೆ ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದಾಖಲಾದ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ. ಕೂಡಲೇ ಪ್ರಕರಣಕ್ಕೆ ಸಂಬಂಸಿದ ಆರೋಪಿತರನ್ನು ಬಂಸಬೇಕು. ಇಲ್ಲದಿದ್ದಲ್ಲಿ ಕೆಂಭಾವಿ ಪೊಲೀಸ್ ಠಾಣೆ ಮುಂದೆ ಅಹೋರಾತ್ರಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗುರು ಕಾಮಾ, ನಗರ ಮಂಡಲ ಅಧ್ಯಕ್ಷ ದೇವೀಂದ್ರಪ್ಪ ಕೋನೇರ, ರಾಜುಗೌಡ ಉಕ್ಕಿನಾಳ, ಬಸವರಾಜಪ್ಪಗೌಡ ವಿಭೂತಿಹಳ್ಳಿ, ಅಡಿವೆಪ್ಪ ಜಾಕಾ, ರಾಜಶೇಖರ ಗೂಗಲ್, ರಾಘವೇಂದ್ರ ಯಕ್ಷಿಂತಿ, ಮಲ್ಲಿನಾಥ ಬಡಿಗೇರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net