ಕಾಂಗ್ರೆಸ್ ಗತವೈಭವ ಮರುಕಳಿಸಲು ಶ್ರಮಿಸೋಣ

2KMD-1
ಕೆ.ಎಂ.ದೊಡ್ಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸಿ.ಎ.ಕೆರೆ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳೀಗೌಡ ಉದ್ಘಾಟಿಸಿದರು.
Published on

ಕೆ.ಎಂ.ದೊಡ್ಡಿ: ಮಾಜಿ ಸಂಸದ ಜಿ.ಮಾದೇಗೌಡರ ಪುಣ್ಯದ ಫಲದಿಂದ ಮಧು ಜಿ.ಮಾದೇಗೌಡ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ ಭಾವುಕರಾದರು.


ಭಾರತೀನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಸಿ.ಎ.ಕೆರೆ ಹೋಬಳಿ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಧು ಜಿ.ಮಾದೇಗೌಡ ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಮೈಸೂರು ಪ್ರಾಂತ್ಯದಲ್ಲಿ ಇತಿಹಾಸ ನಿರ್ಮಿಸಿದ್ದಾರೆ ಎಂದರು.


ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಈ ಹಿಂದೆ ಎಸ್.ಎಂ.ಕೃಷ್ಣ, ಜಿ.ಮಾದೇಗೌಡರಂತಹ ಬಲಿಷ್ಠ ನಾಯಕರ ನಾಯಕತ್ವದಲ್ಲಿ ಪ್ರಬಲವಾಗಿತ್ತು. ಅಂದಿನ ಗತವೈಭವವನ್ನು ಮರುಕಳಿಸಲು ಕಾಂಗ್ರೆಸ್ಸಿಗರಾದ ನಾವೆಲ್ಲ ಶ್ರಮಿಸೋಣ ಎಂದು ಹೇಳಿದರು.


ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಮಾತನಾಡಿ, ಮದ್ದೂರು ಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತಿದೆ. ಕಾಂಗ್ರೆಸ್‌ನಿಂದ ದೊಡ್ಡ ಜಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರು ತಯಾರಾಗಿ ಎಂದು ಕರೆ ನೀಡಿದರು.


ಕೆಪಿಸಿಸಿ ಸದಸ್ಯ ಎಸ್. ಗುರುಚರಣ್ , ಜಿಪಂ ಮಾಜಿ ಸದಸ್ಯ ರಾಜೀವ್ ಮಾತ ನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಪಂ ಮಾಜಿ ಸದಸ್ಯ ಚಂದೂಪುರ ಪಾಪಣ್ಣ, ಮುಖಂಡರಾದ ಮುಟ್ಟನಹಳ್ಳಿ ಶಿವಲಿಂ ಗೇಗೌಡ, ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net