ಕಾಂಗ್ರೆಸ್ ಗೆಲುವಿಗೆ ಒಗ್ಗಟ್ಟಿನಿಂದ ದುಡಿಯಿರಿ

07 yelandur 04
ಯಳಂದೂರಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಗುರುವಾರ ಕೊಳ್ಳೇಗಾಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರು ಮಾಲಾರ್ಪಣೆ ಮಾಡಿ ಗೌರವಿಸಿದರು. ಮರಿಸ್ವಾಮಿ, ತೋಟೇಶ್, ಮಹೇಶ್, ರಘನಾಥ್, ಮಂಜು, ರವಿ ಇದ್ದರು.
Published on

ಯಳಂದೂರು: ಕಾರ್ಯಕರ್ತರು, ಮುಖಂಡರು, ಮಾಜಿ ಶಾಸಕರು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ದುಡಿಯುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೈ ಜೋಡಿಸಬೇಕು ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಮನವಿ ಮಾಡಿದರು.

ಗುರುವಾರ ರಾತ್ರಿ ಪಟ್ಟಣದ ಭಗೀರಥ, ಕನಕದಾಸರು, ಬಸವೇಶ್ವರರು, ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರ ಜತೆ ಮಾತನಾಡಿದರು. ಈ ಬಾರಿ ಕ್ಷೇತ್ರದಲ್ಲಿ ನಡೆದ ಪಕ್ಷದ ಸಮೀಕ್ಷೆ ಆಧಾರದ ಮೇಲೆ ರಾಷ್ಟ್ರ ಹಾಗೂ ರಾಜ್ಯದ ನಾಯಕರು ನನಗೆ ಟಿಕೆಟ್ ನೀಡಿದ್ದು, ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು.

ಅದ್ದೂರಿ ಸ್ವಾಗತ: ತಾಲೂಕಿನ ಮಾಂಬಳ್ಳಿ, ಅಗರ, ಯರಿಯೂರು ಹಾಗೂ ಪಟ್ಟಣದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಎ.ಆರ್.ಕೃಷ್ಣಮೂರ್ತಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಕೊಳ್ಳೇಗಾಲ ಬ್ಲಾಕ್ ಅಧ್ಯಕ್ಷ ತೋಟೇಶ್, ಪ.ಪಂ. ಸದಸ್ಯರಾದ ಮಹೇಶ್, ರಘನಾಥ್, ಮಂಜು, ರವಿ, ತಾ.ಪಂ ಮಾಜಿ ಅಧ್ಯಕ್ಷ ನಿರಂಜನ್, ರಾಮಚಂದ್ರು, ಪ.ಪಂ. ಮಾಜಿ ಸದಸ್ಯ ಜೆ.ಶ್ರೀನಿವಾಸ್, ಮುಖಂಡರಾದ ರಾಜಶೇಖರ್, ಮಲ್ಲು, ನಿಂಗರಾಜು, ಕೃಷ್ಣಪು ದೇವರಾಜು, ಹೊನ್ನೂರು ರೇವಣ್ಣ, ಗ್ರಾ.ಪಂ. ಸದಸ್ಯ ಯರಗಂಬಳ್ಳಿ ಮಲ್ಲು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net