

ಬೀದರ್: ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವಿನೋದಕುಮಾರ ಅಪ್ಪೆ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಪ್ಪೆ, 18 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಜಿಲ್ಲಾ ಘಟಕದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಕ್ರಿಯಾಶೀಲತೆಗೆ ಈಗ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ.