ಕಾಂಗ್ರೆಸ್-ಜೆಡಿಎಸ್‌ನಿಂದ ಜನತೆಗೆ ಅನ್ಯಾಯ

6
Published on

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈವರೆಗೂ ಅಧಿಕಾರ ನಡೆಸಿದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಕ್ಷೇತ್ರವನ್ನು ಅಭಿವೃದ್ಧಿ ಮಾಡದೆ ಜನತೆಗೆ ಅನ್ಯಾಯವೆಸಗಿವೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಎನ್.ಅರುಣ್ ಕುಮಾರ್‌ಗೌಡ ಹೇಳಿದರು.
ಜಯಪುರ ಹೋಬಳಿಯ ಕೆಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಅನ್ಯ ಪಕ್ಷಗಳ ಹಲವು ಮುಖಂಡರು, ಯುವ ಕಾರ್ಯಕರ್ತರನ್ನು ಬಿಜೆಪಿ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.
ಹಲವು ಆಶ್ವಾಸನೆ ನೀಡುವ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್, ಜೆಡಿಎಸ್ ಶಾಸಕರು ಬಳಿಕ ಜನರನ್ನು ಕಡೆಗಣಿಸಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಅಗಿಲ್ಲ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಜನತೆ ಬಿಜೆಪಿ ಬೆಂಬಲಿಸಬೇಕು. ರಾಜ್ಯದಲ್ಲಿ ಮತೊಮ್ಮೆ ಬಿಜೆಪಿ ಸರ್ಕಾರ ಬರಲಿದ್ದು, ಕ್ಷೇತ್ರದ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದ ಹಲವಾರು ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ರಾಜ್ಯದ ಜನತೆ ಬಿಜೆಪಿಯತ್ತ ವಾಲಿರುವುದು ಸ್ಪಷ್ಟವಾಗಿದೆ. ಹೀಗಾಗಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಖಂಡರಾದ ಉಮೇಶ್, ಅನಿಲ್, ಮಹಾದೇವ, ರವಿಕುಮಾರ್, ಚೇತನ್, ಬಸವರಾಜು, ಸ್ವಾಮಿ, ಯೋಗೇಶ್, ಕುಮಾರ, ನಂದೀಶ್, ಶಿವುಬಾಬು, ಪ್ರಭಾಕರ್, ಪಚ್ಚೆಗೌಡ ಇತರರು ಬಿಜೆಪಿ ಸೇರ್ಪಡೆಯಾದರು.
ಪಕ್ಷದ ಮುಖಂಡರಾದ ಗೋಪಾಲ್ಗೌಡ, ವಿಜಯ್ಗೌಡ, ಎನ್.ಕೆ.ರವಿಕುಮಾರ್, ಮೂಗನಹುಂಡಿ ಮಂಜು, ಪ್ರಭು, ಕೋಟೆಹುಂಡಿ ಮಾಲೆಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net