

ಮೈಸೂರು: ಕಾಂಗ್ರೆಸ್ ಪಕ್ಷದ ಧೋರಣೆಯಿಂದ ಬೇಸತ್ತು ಪಕ್ಷವನ್ನು ತೊರೆದು ಬಿಎಸ್‌ಪಿ ಸೇರ್ಪಡೆಗೊಂಡಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ಹೇಳಿದರು.
ಕಾಂಗ್ರೆಸ್ ದೀನದಲಿತರು, ಹಿಂದುಳಿದವರ ಅಭಿವೃದ್ಧಿಯ ಕುರಿತು ಮಾತನಾಡುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆ ಸಮುದಾಯಗಳ ಅಭಿವೃದ್ಧಿಗೆ ನಿರೀಕ್ಷಿತ ಕೊಡುಗೆ ನೀಡದೆ ಕೇವಲ ಓಟ್‌ಬ್ಯಾಂಕ್‌ಗಾಗಿ ಬಳಕೆ ಮಾಡಿಕೊಂಡಿದೆ. ಕಾಂಗ್ರೆಸ್‌ನ ಈ ಧೋರಣೆ ಖಂಡಿಸಿ ಬಿಎಸ್‌ಪಿಗೆ ಸೇರ್ಪಡೆಯಾಗಿದ್ದೇನೆ. ಬಿಎಸ್‌ಪಿ ಪಕ್ಷದಲ್ಲಿ ನನಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಎಸ್‌ಪಿ ಪ್ರಮುಖರಾದ ಮಾರಸಂದ್ರ ಮುನಿಯಪ್ಪ, ಡಾ. ಕೃಷ್ಣಮೂರ್ತಿ, ಎಂ. ಗೋಪಿನಾಥ್, ಮುನಿಯಪ್ಪ, ಶಿವಮಾದು ಇದ್ದರ