

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಅರ್ಹತೆ,ವಿದ್ವತ್‌ನ್ನು ಗೌರವಿಸದೇ ಅವರನ್ನು,ಅವರ ಜೀವಿತಾವಧಿ ನಿರಂತರ ಅವಮಾನಿಸಿರುವ ಕಾಂಗ್ರೆಸ್ಸಿ ಗೆ ಅಂಬೇಡ್ಕರ್ ಕುರಿತು ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲವೆಂದು ರಾಜ್ಯಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ‌್ಯದರ್ಶಿ ಉ ಮೇಶ ಕಾರಜೋಳ ಹೇಳಿದ್ದಾರೆ.
ಶೋಷಿತ ಸಮುದಾಯದವರನ್ನು ಮತ ಬ್ಯಾಂಕನ್ನಾಗಿ ಮಾಡಿಕೊಂಡು ಈವೆರೆಗೂ ಅಧಿಕಾರದ ಸವಿ ಅನುಭವಿಸುತ್ತಾ ಬಂದಿರುವ ಕಾ ಂಗ್ರೆಸ್,ಅಂಬೇಡ್ಕರ್ ನಿಧನ ಹೊಂದಿದಾಗ ಹೊಸದಿಲ್ಲಿಯಲ್ಲಿ ಅವರ ಅಂತ್ಯಕ್ರಿಯೆಗೆ ಅವಕಾಶ ನೀಡದೆ,ಮುಂಬಯಿಗೆ ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲು ಸೂಕ್ತ ವ್ಯವಸ್ಥೆ ಮಾಡದೆ ತಾತ್ಸಾರ ಮಾಡಿತ್ತು.
ರಾಜಕೀಯ ಅಸ್ತಿತ್ವಕ್ಕಾಗಿ ಅಂಬೇಡ್ಕರ್ ಹೆಸರು ಪಟಿಸುತ್ತಿರುವ ಕಾಂಗ್ರೆಸ್ಸಿಗರ ಗೋಮುಖ ವ್ಯಾಘ್ರ ನೀತಿ ಬಯಲು ಮಾಡಲು ಕೇಂದ್ರ ಗೃಹ ಸಚಿವ ಅಮಿತ್‌ಶಾ ಆಡಿದ ಮಾತುಗಳನ್ನು ತಿರುಚಿ ಅಪಪ್ರಚಾರ ನಡೆಸಿ ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿರುವು ದು ನಾಚಿಕೆಗೇಡಿತನದ ಪರಮಾವಧಿ ಎಂದು ಕಾಂಗ್ರೆಸ್ಸಿಗರ ನಡೆಯನ್ನು ಉಮೇಶ್ ಕಾರಜೋಳ ಹೇಳಿಕೆಯಲ್ಲಿ ಖಂಡಿಸಿದ್ದಾರೆ.