ಕಾಂಗ್ರೆಸ್ ನವರಿಗೆ ಅಂಬೇಡ್ಕರ್ ಅವರ ಬಗ್ಗೆ ಒಳ್ಳೆಯ ವಿಚಾರ ಇಲ್ಲ : ವಿಜಯೇಂದ್ರ ವಾಗ್ದಾಳಿ

oplus_2
oplus_2
Published on

ಕಾಂಗ್ರೆಸ್ ನವರಿಗೆ ಅಂಬೇಡ್ಕರ್ ಅವರ ಬಗ್ಗೆ ಒಳ್ಳೆಯ ವಿಚಾರ ಇಲ್ಲ : ವಿಜಯೇಂದ್ರ ವಾಗ್ದಾಳಿ

ವಿಜಯವಾಣಿ ಸುದ್ದಿಜಾಲ ನಿಪ್ಪಾಣಿ: ಗಾಂಧಿ ಕುಟುಂಬಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ ಅವರಿಗೆ ಭಾರತ ರತ್ನ ನೀಡಬೇಕು ಅನ್ನೋದು ಮನಸ್ಸಿನಲ್ಲಿ ಬರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ನಿಪ್ಪಾಣಿಯಲ್ಲಿ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ ಭೀಮ ಹೆಜ್ಜೆ 100 ರ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತಕ್ಕೆ ಸಂವಿಧಾನ ತಂದುಕೊಟ್ಟ ಪುಣ್ಯಾತ್ಮ ಅಂಬೇಡ್ಕರ್. ದುರಂತ ಅಂದ್ರೇ ಅರವತ್ತೈದು ವರ್ಷ ಕಾಂಗ್ರೆಸ್ ದೇಶದಲ್ಲಿ ಆಡಳಿತ ನಡೆಸಿತು. ಸಂವಿಧಾನ ನೀಡಿದ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ.ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ ಮೇಲೆ ಭಾರತ ರತ್ನ ನೀಡಿದರು. ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನ ಕಾಂಗ್ರೆಸ್ ಸೋಲಿಸಿದರು.ಅವರನ್ನ ಸೋಲಿಸಿದವರಿಗೆ ಕಾಂಗ್ರೆಸ್ ಪದ್ಮಭೂಷಣ ನೀಡಿ ಸನ್ಮಾನಿಸಿತು ಎಂದು ಆರೋಪಿಸಿದರು.

ಕಾಂಗ್ರೆಸ್ ನವರಿಗೆ ಅಂಬೇಡ್ಕರ್ ಅವರ ಬಗ್ಗೆ ಒಳ್ಳೆಯ ವಿಚಾರ ಇಲ್ಲ. ಕಾಂಗ್ರೆಸ್ ಚುನಾವಣೆಯಲ್ಲಿ ಸೋತ ಮೇಲೆ ಅಂಬೇಡ್ಕರ್ ಅವರನ್ನ ಪದೇ ಪದೇ ನೆನಪಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ, ರಾಹುಲ್ ಗಾಂಧಿ ಅವರ ಮನಸ್ಸಲ್ಲಿ ಅಂಬೇಡ್ಕರ್ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ.ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ.ಕರ್ನಾಟಕದಲ್ಲಿ ರಾಜ್ಯದಲ್ಲಿ ಇರೋದು ಜನ ವಿರೋಧಿ ಸರ್ಕಾರ‌.ಇದು ಬೆಲೆ ಏರಿಕೆ ಸರ್ಕಾರ, ಐವತ್ತು ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದೆ. ಎಸ್ಸಿ, ಎಸ್ಟಿ ಹಣವನ್ನ ದುರುಪಯೋಗ ಮಾಡಿದ್ದು ಕಾಂಗ್ರೆಸ್ ಸರ್ಕಾರ.

ಇಂತಹ ಸರ್ಕಾರವನ್ನ ರಾಜ್ಯದಿಂದ ಬುಡ ಸಮೇತ ಕಿತ್ತು ಒಗೆಯಬೇಕು.

ಮುಂದೆ ಬರುವ ದಿನಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿ ಸ್ವಂತ ಶಕ್ತಿ ಮೇಲೆ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣ‌. ಜನ ವಿರೋಧಿ ಸರ್ಕಾರವನ್ನ ಕಿತ್ತು ಒಗೆಯೋನ ಎಂದ ವಿಜಯೇಂದ್ರ ಕರೆ ನೀಡಿದರು.

ವಿರೋದ ಪಕ್ಷದ ನಾಯಕ ಆರ್.ಅಶೋಕ,ಚಲುವಾದಿ ನಾರಾಯಣಸ್ವಾಮಿ, ಗೋವಿಂದ ಕಾರಜೋಳ,ಶಶಿಕಲಾ ಜೊಲ್ಲೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net