ಕಾಂಗ್ರೆಸ್ ಪಾದಯಾತ್ರೆ ಇಂದು

08 charan 14
ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿದರು. ಅಕ್ಬರ್ ಆಲಿ, ಭಾಸ್ಕರ್, ಪಿ.ಮರಿಸ್ವಾಮಿ, ಬಿ.ಕೆ.ರವಿಕುಮಾರ್, ಮಹಮದ್ ಅಸ್ಗರ್ ಮುನ್ನಾ ಇತರರಿದ್ದರು.
Published on

ಚಾಮರಾಜನಗರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಸಂಬಂಧ ಆ.10 ರಂದು ಜಿಲ್ಲೆಯಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ಆದೇಶದಂತೆ ಜಿಲ್ಲೆಯಲ್ಲಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಆ.10 ರಂದು ಗುಂಡ್ಲುಪೇಟೆ ಮುಖ್ಯರಸ್ತೆಯಲ್ಲಿರುವ ಬಣ್ಣಾರಿ ಅಮ್ಮನ್ ದೇವಾಲಯದಿಂದ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಮಾರ್ಗಮಧ್ಯದ ಶಿವಪುರ, ಉತ್ತವಳ್ಳಿ, ಮೂಡ್ಲುಪುರ ಮೂಲಕ ಚಾಮರಾಜನಗರ ತಲುಪಲಾಗುವುದು. ಸಂತೇಮರಹಳ್ಳಿ ವೃತ್ತದಿಂದ ಮಸಗಾಪುರ, ಮಾದಾಪುರ, ಮಂಗಲ, ಮಹಂತಾಳಪುರ ತಲುಪಿ ಪಾದಯಾತ್ರೆ ಮುಕ್ತಾಯ ಮಾಡಲಾಗುವುದು ಎಂದರು.

ಎಐಸಿಸಿ ಚಾಮರಾಜನಗರ ವೀಕ್ಷಕ ಅಕ್ಬರ್ ಆಲಿ, ಭಾಸ್ಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಎ.ಎಸ್.ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್, ಆರ್.ಮಹಾದೇವ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net