ಕಾಂಗ್ರೆಸ್ ಪ್ರಚಾರಕ್ಕೆ ಬಿಜೆಪಿ ಕಿರಿಕಿರಿ

Published on

ಅರಸೀಕೆರೆ: ಕಾಂಗ್ರೆಸ್ ವರಿಷ್ಠರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ವಿನಾಕಾರಣ ಕಿರಿಕಿರಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ತಾಲೂಕಿನ ಗಂಡಸಿ ಹ್ಯಾಂಡ್ ಪೋಸ್ಟ್ ಗ್ರಾಮದಲ್ಲಿ ಆಯೋಜಿಸಿದ್ದ ಸಮಾವೇಶಕ್ಕೆ ಆಗಮಿಸುವ ಮುನ್ನ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸುಗಮ ಅವಕಾಶ ನೀಡಲಾಗಿದೆ. ಆದರೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಪ್ರಚಾರಕ್ಕೆ ಒಂದೇ ರಸ್ತೆ ಮಾರ್ಗ ನೀಡಲಾಗಿದೆ. ಪ್ರಚಾರದ ಭರಾಟೆಯಲ್ಲಿ ಬೆಂಗಳೂರು ನಗರದ ರಸ್ತೆಗಳನ್ನು ಬಂದ್ ಮಾಡಿಸಿ ಜನರಿಗೆ ತೊಂದರೆ ನೀಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹತ್ಯಗೆ ಸಂಚು ರೂಪಿಸಲಾಗಿದೆ ಎನ್ನು ಆಡಿಯೋ ವೈರಲ್ ಆಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net